ಸೋಮವಾರಪೇಟೆ, ಅ. 2: ಕರ್ನಾಟಕ ಅಥ್ಲೇಟಿಕ್ಸ್ ಅಸೋಸಿಯೇಷನ್ ವತಿಯಿಂದ ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಅಥ್ಲೇಟಿಕ್ಸ್‍ನ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿನಿ ಸಿ.ಟಿ. ಗಾನವಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
33ನೇ ಕರ್ನಾಟಕ ಸ್ಟೇಟ್ ಜೂನಿಯರ್ ಮತ್ತು ಸೀನಿಯರ್ ಚಾಂಪಿಯನ್‍ಶಿಪ್‍ನ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಈಕೆ, ಕೇರಳದ ತಿರುವನಂತಪುರಂನಲ್ಲಿ ನಡೆದ 29ನೇ ದಕ್ಷಿಣ ವಲಯ ಜೂನಿಯರ್ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ.
ಕೂಡಿಗೆ ಕ್ರೀಡಾ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಗಾನವಿ, ಸೋಮವಾರಪೇಟೆಯ ಮೂವತ್ತೊಕ್ಲು ಗ್ರಾಮದ ಚೀಕಂಡ ತಿಮ್ಮಯ್ಯ ಮತ್ತು ಶೋಭಾ ದಂಪತಿ ಪುತ್ರಿ. ಈಕೆಗೆ ಕ್ರೀಡಾ ತರಬೇತುದಾರ ಅಂತೋಣಿ ಅವರು ತರಬೇತಿ ನೀಡಿದ್ದಾರೆ.