ಸೋಮವಾರಪೇಟೆ, ಅ. 2: ಸಂತೆ ದಿನವಾದ ಸೋಮವಾರದಂದು ಪಟ್ಟಣದ ಕ್ಲಬ್‍ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ.

ಸಂತೆ ದಿನದಂದು ಕ್ಲಬ್‍ರಸ್ತೆಯಲ್ಲಿ ಹೆಚ್ಚಿನ ವಾಹನ ಮತ್ತು ಜನ ಸಂಚಾರವಿದ್ದು, ಪಟ್ಟಣದಿಂದ ಕ್ಲಬ್ ರಸ್ತೆಯ ಮೂಲಕ ತೆರಳುತ್ತಿದ್ದ ವ್ಯಾಗನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಇಳಿದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.