ಕುಶಾಲನಗರ, ಅ. 2: ಕುಶಾಲನಗರ ಹೋಬಳಿಯ ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಸಹಾಯಕ ಕುಲಸಚಿವೆಯಾಗಿ ಸೇವೆ ಸಲ್ಲಿಸುತ್ತಿದ್ದ ಭಾರತಿ ಅವರು ಸೇವೆಯಿಂದ ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಪಿ.ಎಲ್. ಧರ್ಮ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಆಡಳಿತ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.