ಮಡಿಕೇರಿ, ಅ. 3: ಸಿದ್ದಾಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜಿ.ಪಂ. ಸದಸ್ಯೆ ಸರಿತಾ ಪೂಣಚ್ಚ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದೆ ಕಡೆಗಣಿಸಿದ್ದಾರೆ ಎಂದು ಆರೋಪಿಸಿರುವ ಜೆಡಿಎಸ್ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಇಸಾಕ್ ಖಾನ್, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾಪುರ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸ್ಥಾನಕ್ಕೆ ಆಯ್ಕೆಯಾಗಿರುವ ಸರಿತಾ ಪೂಣಚ್ಚ ಅವರನ್ನು ಜನರು ಗುರುತಿಸಿ ಗೆಲ್ಲಿಸಿದ್ದಾರೆ. ಗೆದ್ದು ಬಂದ ನಂತರ ಯಾವದೇ ಸಮಸ್ಯೆಗಳಿಗೂ ಸ್ಪಂದಿಸದೆ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಸದಸ್ಯ ಇಕ್ಬಾಲ್ ಹಾಗೂ ನಾಸಿರ್ ಉಪಸ್ಥಿತರಿದ್ದರು.