ಮಡಿಕೇರಿ, ಅ. 2: ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ ಬಿಸಿ ಊಟ ನೀಡುವ ‘ಮಾತೃಪೂರ್ಣ’ ಯೋಜನೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ‘ಮಾತೃಪೂರ್ಣ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪೂರಕ ಪೌಷ್ಟಿಕ ಆಹಾರ ಕಾರ್ಯ ಕ್ರಮದಡಿಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯದಲ್ಲಿನ ಪೌಷ್ಟಿಕಾಂಶದ ಸುಧಾರಣೆಗೆ ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ತಯಾರಿಸಿ ಮಧ್ಯಾಹ್ನದ ಸಮಯದಲ್ಲಿ ಕೊಡಲ್ಪಡುವ ವೈಶಿಷ್ಟ್ಯಪೂರ್ಣ ಯೋಜನೆ ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಕರೆ ನೀಡಿದರು.

ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ್ದು, ಚದುರಿದಂತೆ ಅಲ್ಲಲ್ಲಿ ಮನೆಗಳು ಇರುವದರಿಂದ ಅಂಗನವಾಡಿ ಕೇಂದ್ರಗಳಿಗೆ ಗರ್ಭಿಣಿ ಹಾಗೂ ಬಾಣಂತಿಯರು ಬರುವದು ಕಷ್ಟಸಾಧ್ಯ. ಆದರೂ ಮಾತೃಪೂರ್ಣ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ. ಎಲ್ಲಾ ಬಡ ಕುಟುಂಬಗಳಿಗೆ ಪ್ರತಿ ತಿಂಗಳು

(ಮೊದಲ ಪುಟದಿಂದ) ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ತಲಾ 7 ಕೆ.ಜಿ. ಅಕ್ಕಿ, ಕಡುಬಡವರಿಗೆ ಅಂತ್ಯೋದಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ವಿತರಣೆ, ಅಂಗನವಾಡಿ ಮಕ್ಕಳು ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟ. ಈ ಕಾರ್ಯಕ್ರಮಗಳ ಜೊತೆಗೆ ‘ಮಾತೃಪೂರ್ಣ’ ಯೋಜನೆಯೂ ಜಾರಿಗೊಂಡಿದೆ ಎಂದರು.

ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ ಸರ್ಕಾರ ಉತ್ತಮ ಯೋಜನೆ ಜಾರಿಗೊಳಿಸಿದ್ದು, ಇದರ ಪ್ರಯೋಜನ ಗರ್ಭಿಣಿಯರು ಹಾಗೂ ಬಾಣಂತಿಯರು ಪಡೆದುಕೊಳ್ಳು ವಂತಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ ಜಿಲ್ಲೆಯಲ್ಲಿ ಅಪೌಷ್ಟಿಕತೆ, ಅಜ್ಞಾನ, ಮೂಡನಂಬಿಕೆಗಳಿಂದ ತಾಯಿ ಮತ್ತು ಶಿಶು ಮರಣ ಕಂಡುಬರುತ್ತಿದ್ದು, ತಾಯಿ ಮತ್ತು ಶಿಶು ಮರಣ ನಿಯಂತ್ರಣ ಮಾಡಲು ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳು ನಡೆಯಬೇಕಿದೆ ಎಂದರು.

ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಪಡೆದುಕೊಳ್ಳು ವಂತಾಗಬೇಕು. ತಾಯಿ ಮತ್ತು ಶಿಶು ಮರಣ ನಿಯಂತ್ರಣಕ್ಕೆ ಬರಬೇಕು ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ಪಾರ್ವತಿ ಮಾತನಾಡಿ ಜಿಲ್ಲೆಯಲ್ಲಿ ಕಳೆದ ವರ್ಷ 7 ಹಾಗೂ ಪ್ರಸಕ್ತ ವರ್ಷ ಇಬ್ಬರು ತಾಯಂದಿರು ಮರಣ ಹೊಂದಿದ್ದಾರೆ. ಇದಕ್ಕೆ ಅಪೌಷ್ಟಿಕತೆ, ರಕ್ತಹೀನತೆ ಮತ್ತಿತರ ಕಾರಣವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಮಮ್ತಾಜ್ ಅವರು ಮಾತೃಪೂರ್ಣ ಯೋಜನೆ ಯಡಿ ಮಧ್ಯಾಹ್ನದ ಪೌಷ್ಟಿಕ ಬಿಸಿ ಊಟದಲ್ಲಿ ಅನ್ನ, ಸಾಂಬರ್, ಪಲ್ಯದ ಜೊತೆಗೆ ಬೇಯಿಸಿದ ಮೊಟ್ಟೆ ಮತ್ತು ಹಾಲು ಒಳಗೊಂಡಿದ್ದು, ತಿಂಗಳಿಗೆ 25 ದಿನಗಳಂತೆ, ವರ್ಷದಲ್ಲಿ ಒಟ್ಟು 300 ದಿನಗಳು ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಮೊಳಕೆ ಬರಿಸಿದ ಕಾಳು ಕೊಡಲಾಗುತ್ತದೆ ಎಂದರು.

ಮಾತೃಪೂರ್ಣ ಯೋಜನೆ ಯಿಂದ ಗರ್ಭಿಣಿ ಮತ್ತು ಹಾಲು ಣಿಸುವ ತಾಯಂದಿರಿಗೆ ಒಂದು ದಿನಕ್ಕೆ ಬೇಕಾಗಿರುವ ಪ್ರೊಟೀನ್ ಕ್ಯಾಲರಿ ಮತ್ತು ಕ್ಯಾಲ್ಸಿಯಂ ಅಂಶಗಳು ಸುಮಾರು ಶೇ.40-45 ರಷ್ಟು ಪೌಷ್ಟಿಕ ಬಿಸಿ ಊಟದಿಂದ ದೊರೆಯಲಿದೆ. ಮುಖ್ಯವಾಗಿ ಹೆರಿಗೆ ಸಮಯದಲ್ಲಿ ಗರ್ಭಿಣಿ ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ತಡೆಯುವದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಸ್ತ್ರೀಶಕ್ತಿ ಒಕ್ಕೂಟಗಳ ಅಧ್ಯಕೆÀ್ಷ ಮೇರಿಅಂಬುದಾಸ್ ಮಾತನಾಡಿ ಗರ್ಭಿಣಿಯಾದ ಕೂಡಲೇ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮತ್ತು ಪ್ರಸವ ಪೂರ್ವ ಆರೈಕೆ ಸೇವೆಗಳು. ಗರ್ಭಿಣಿ ಮತ್ತು ಬಾಣಂತಿಯರಿಗೆ ಅಗತ್ಯವಿರುವ ಎಲ್ಲಾ ಪೌಷ್ಟಿಕಾಂಶಗಳನ್ನೊಳಗೊಂಡ ಮಧ್ಯಾಹ್ನದ ಊಟದಲ್ಲಿ ದೊರೆಯಲಿದೆ ಎಂದರು.