ಸೋಮವಾರಪೇಟೆ, ಅ.5: ಸ್ಥಳೀಯ ಓಎಲ್‍ವಿ ಕಾನ್ವೆಂಟ್‍ನ ವಾಲಿಬಾಲ್ ಬಾಲಕರ ತಂಡವು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸುವ ಮೂಲಕ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾ. 6, 7 ಮತ್ತು 8ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಸೆಣಸಲಿದ್ದಾರೆ.

ಇದರೊಂದಿಗೆ ತಾಲೂಕು ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ವಿಭಾಗದ ಹ್ಯಾಂಡ್‍ಬಾಲ್ ಹಾಗೂ ಬಾಸ್ಕೆಟ್ ಬಾಲ್‍ನಲ್ಲಿ ಓಎಲ್‍ವಿ ಕಾನ್ವೆಂಟ್‍ನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ರಿಲೇ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದ ಗುಂಡು ಎಸೆತದಲ್ಲಿ ಕೃತಿಕ ದ್ವಿತೀಯ ಹಾಗೂ ತಟ್ಟೆ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ. ಅರ್ಪಿತ ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಬಾಲಕರ ವಿಭಾಗದ ತಟ್ಟೆ ಎಸೆತದಲ್ಲಿ ಬಿಪಿನ್ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದು, ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್. ಮೋಹನ್ ಹಾಗೂ ಟಿ.ಎನ್. ಯುವರಂಜನ್ ತರಬೇತಿ ನೀಡಿದ್ದಾರೆ.