ಸೋಮವಾರಪೇಟೆ, ಅ. 4: ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕುಮಾರೇಶ್ವರ ಜಯಂತಿ ಮಹೋತ್ಸವ ಸಮಿತಿ ಹುಬ್ಬಳ್ಳಿ ಇವರ ಆಶ್ರಯದಲ್ಲಿ “ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳ 150ನೇ ಜಯಂತಿ” ಅಂಗವಾಗಿ ಜಿಲ್ಲೆಯಲ್ಲಿ ಒಂಬತ್ತು ದಿನಗಳ ಕಾಲ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಶರಣ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಎಸ್.ಮಹೇಶ್ ತಿಳಿಸಿದ್ದಾರೆ.
ತಾ. 5 ರಂದು (ಇಂದು) ಸಂಜೆ 7 ಗಂಟೆಗೆ ಜಿಲ್ಲೆಯ ಗಡಿಭಾಗದ ಯಸಳೂರು ಕಲ್ಯಾಣ ಮಂಟಪದಲ್ಲಿ, ತಾ. 6ರಂದು ಬೆಳಿಗ್ಗೆ 11 ಗಂಟೆಗೆ ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮಿಜಿ ಪ್ರೌಢಶಾಲಾ ಸಭಾಂಗಣದಲ್ಲಿ, ತಾ.7ರಂದು ಬೆಳಿಗ್ಗೆ 11 ಗಂಟೆಗೆ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಗುರುಸಿದ್ದ ಸ್ವಾಮಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಳಗಾಂ ಜಿಲ್ಲೆಯ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಬೂದಿಹಾಳ್ ಮಠದ ಶ್ರೀ ಸಂಗಮೇಶ ದೇವರು ಸ್ವಾಮೀಜಿ, ಮಹಾರಾಷ್ಟ್ರದ ಅಕ್ಕಲಕೋಟೆ ಮಠದ ಶ್ರೀ ಚೆನ್ನಬಸವ ದೇವರು ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಉಪನ್ಯಾಸ ನೀಡಲಿದ್ದಾರೆ ಎಂದು ಮಹೇಶ್ ತಿಳಿಸಿದ್ದಾರೆ.