ಮಡಿಕೇರಿ, ಅ. 4: ಹಿಂದು ಯುವಕನ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ವತಿಯಿಂದ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜ.ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ಮಾಡಿ ರಸ್ತೆ ತಡೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು.
ವಿಶ್ವ ಹಿಂದೂ ಪರಿಷದ್ ಪ್ರಧಾನ ಕಾರ್ಯದರ್ಶಿ ನರಸಿಂಹ, ಭಜರಂಗದಳ ಸಂಚಾಲಕ ಅಜಿತ್ಕುಮಾರ್, ಸಹ ಸಂಚಾಲಕ ಚೇತನ್, ಸಾರ್ವಜನಿಕ ಹಿತರಕ್ಷಣಾ ಸಮಿತಿ ಮುಖಂಡ ಪ್ರಸನ್ನಭಟ್, ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷ ಗಣೇಶ್, ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ರಾಬಿನ್ ದೇವಯ್ಯ, ಜಗದೀಶ್, ಗಣೇಶ್, ಅರುಣ್ ಶೆಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.