ಸುಂಟಿಕೊಪ್ಪ, ಅ. 5: ಚಿಕ್ಲಿಹೊಳೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 22ನೇ ವರ್ಷದ ಆಯುಧಪೂಜೆ ಮತ್ತು ವಿಜಯದಶಮಿಯನ್ನು 2 ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಯಿತು.

ಆಯುಧಪೂಜೆಯ ಅಂಗವಾಗಿ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಸದಸ್ಯ ವಿಜು ಚಂಗಪ್ಪ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಸೇವಾ ಸಮಿತಿಯ ಅಧ್ಯಕ್ಷ ಮೋಹನ್ ವಹಿಸಿದ್ದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸುಮಲತಾ, ಸದಸ್ಯರುಗಳಾದ ಲಲಿತ, ಅಬ್ದುಲ್‍ಕುಟ್ಟಿ, ಜೋಸೆಫ್, ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾದ ಸುಮೇಶ್, ನವೀನ್, ಸೇವಾ ಸಮಿತಿಯ ಗೌರವಧ್ಯಕ್ಷ ಉದಯ ಶ್ರೀ ರಾಮ ಮಂದಿರ ದೇವಸ್ಥಾನ ಸಮಿತಿ ಅಧ್ಯಕ್ಷ ಜಯಂತ, ಮಾಜಿ ಗ್ರಾ.ಪಂ. ಅಧ್ಯಕ್ಷ ಡಾ. ಶಶಿಕಾಂತ ರೈ, ಕಂಬಿಬಾಣೆ ಪತ್ರಕರ್ತ ಸಿ.ಎ. ಮೊೈದು, ಉಪಸ್ಥಿತರಿದ್ದರು.

ನಂತರ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನೆರೆದಿದ್ದ ಜನರ ಮನಸೂರೆಗೊಳಿಸಿತ್ತು. ರಕ್ಷಿತ ಪ್ರಾರ್ಥಿಸಿ, ಜೋಸೆಫ್ ಸ್ವಾಗತಿಸಿ, ಉದಯ ನಾಯ್ಕ್ ನಿರೂಪಿಸಿ ವಂದಿಸಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.

ವಿಜಯದಶಮಿಯ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ವಿದ್ಯುತ್ ದೀಪಾಲಾಂಕೃತ ಭವ್ಯ ಮಂಟಪದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಕುಳ್ಳಿರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರಳಿ ಕಂಬಿಬಾಣೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಸಡಗರ ಸಂಭ್ರಮದಿಂದ ತೆರೆ ಎಳೆಯಲಾಯಿತು.