ನಾಪೆÇೀಕ್ಲು, ಅ. 5: ಸರಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನಾ ತರಬೇತಿ ‘ವಿಶ್ವಾಸಕಿರಣ’ಕ್ಕೆ ಸಮೀಪದ ನಾಪೆÇೀಕ್ಲು ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹಸೈನಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಉಪ ಪ್ರಾಂಶುಪಾಲೆ ಬಡ್ಡೀರ ನಳಿನಿ, ಇಂಗ್ಲೀಷ್ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ರಜಾ ದಿನಗಳಂದು ವಿಶೇಷ ಬೋಧನಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 9 ಮತ್ತು 10ನೇ ತರಗತಿಯ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಲ್ಲಿ ಕಲಿಕಾಂಶಗಳ ವಿಷಯ ಪರಿಕಲ್ಪನೆಯನ್ನು ಅರ್ಥೈಸಿಕೊಳ್ಳುವಲ್ಲಿ ಹಾಗೂ ಪರೀಕ್ಷೆಯನ್ನು ಎದುರಿಸುವಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ಪ್ರಯುಕ್ತ ವಿಶೇಷ ಬೋಧನಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ತರಬೇತಿಯಲ್ಲಿ ನಾಪೆÇೀಕ್ಲು ಪದವಿಪೂರ್ವ ಕಾಲೇಜು, ಹೊದವಾಡ ಸರಕಾರಿ ಪ್ರೌಢಶಾಲೆ ಹಾಗೂ ಎಮ್ಮೆಮಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಸಂಪನ್ಮೂಲ ವ್ಯಕ್ತಿಗಳಾದ ಶರತ್, ಭವ್ಯ, ಅಪರ್ಣಾ, ಸುರೇಶ್, ಉಷಾರಾಣಿ, ಶಾಲಾ ಶಿಕ್ಷಕರು, ಎಸ್‍ಡಿ ಎಂಸಿ ಸದಸ್ಯರು ಉಪಸ್ಥಿತರಿದ್ದರು.