ಮಡಿಕೇರಿ, ಅ. 5: ಬೇಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬೇಂಗೂರು, ಐವತ್ತೊಕ್ಲು, ಕೊಳಗದಾಳು, ಕೊಟ್ಟೂರು, ಬಿ. ಬಾಡಗ ಗ್ರಾಮಗಳ ಜಮಾಬಂದಿ ಸಭೆ ತಾ. 7 ರಂದು ಮಧ್ಯಾಹ್ನ 12 ಗಂಟೆಗೆ ಚೇರಂಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪಂಚಾಯಿತಿ ಅಧ್ಯಕ್ಷ ಕೆ.ಬಿ. ಅಶೋಕ್ ಅಧ್ಯಕ್ಷತೆಯಲ್ಲಿ ಮತ್ತು ನೋಡೆಲ್ ಅಧಿಕಾರಿ ಬಿ. ಚಿಕ್ಕಬಸವಯ್ಯ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇವರ ಉಸ್ತುವಾರಿಯಲ್ಲಿ ನಡೆಯಲಿದೆ.

ಬೇಟೋಳಿ: ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ಜಮಾಬಂದಿ ಸಭೆ ತಾ. 11 ರಂದು ಪೂರ್ವಾಹ್ನ 10.30 ಗಂಟೆಗೆ ಬೇಟೋಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಬಿ. ಚೋಂದಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ.

*ಗೋಣಿಕೊಪ್ಪಲು: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2016-17ನೇ ಸಾಲಿನ ಜಮಾಬಂದಿ ಸಭೆ ತಾ. 9 ರಂದು ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿಯಾಗಿ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಸಮ್ಮುಖದಲ್ಲಿ ನಡಯಲಿದೆ.