ಸೋಮವಾರಪೇಟೆ, ಅ.6: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು ತಾ. 10ರಂದು ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ತಿಳಿಸಿದ್ದಾರೆ.

ತಾಲೂಕಿನ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ತಾ. 10ರಂದು ಬೆಳಿಗ್ಗೆ 9.30ಕ್ಕೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ 1ರಿಂದ 5ನೇ ತರಗತಿ ಹಾಗೂ 6ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ವಿಭಾಗಗಳಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧೆಗಳು ನಡೆಯಲಿವೆ.

ತಾ. 11ರಂದು ಬೆಳಿಗ್ಗೆ 9.30ಕ್ಕೆ ಪ್ರೌಢಶಾಲಾ ವಿಭಾಗದಲ್ಲಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಹಾಗೂ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ.