ಮಡಿಕೇರಿ, ಅ. 7: ನುಡಿದಂತೆ ನಡೆದಿರುವ ರಾಜ್ಯ ಕಾಂಗ್ರೆಸ್ ಸರಕಾರ ಜನಪರ ಕಾಳಜಿಯನ್ನು ತೋರಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಬಹುಮತ ಗಳಿಸುವ ಮೂಲಕ ಕಾಂಗ್ರೆಸ್ ಸರಕಾರವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಬನ್ನಿ ಮಂಟಪದ ಬಳಿ ನಗರ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ನಡಿಗೆ ಮನೆಮನೆ ಕಡೆಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದÀರು. ಸರಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಅನೇಕ ಜನಪರ ಯೋಜನೆಗಳ ಮೂಲಕ ಜನಪ್ರಿಯತೆಯನ್ನು ಗಳಿಸಿದೆ. ಚುನಾವಣೆ ಸಂದರ್ಭ ನೀಡಿದ್ದ ಬಹುತೇಕ ಎಲ್ಲಾ ಭರವಸೆಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಯಶಸ್ವಿ ಯಾಗಿದ್ದು, ಈ ಬಗ್ಗೆ ಜನರಿಗೂ ಮನವರಿಕೆಯಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಐಎನ್‍ಟಿಯುಸಿ ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ನಡಿಗೆ ಮನೆಮನೆ ಕಡೆಗೆ ಅಭಿಯಾನದ ಉಸ್ತುವಾರಿ ನಾಪಂಡ ಮುತ್ತಪ್ಪ ಮಾತನಾಡಿ, ಮಡಿಕೇರಿ ನಗರದ 23 ವಾರ್ಡ್‍ಗಳ 8 ಸಾವಿರಕ್ಕೂ ಅಧಿಕ ಮನೆಗಳಿಗೆ ತೆರಳಿ ರಾಜ್ಯ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವದಾಗಿ ತಿಳಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಉತ್ಸುಕತೆಯಿಂದ ಪಕ್ಷದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದು, ಎಲ್ಲಾ ಬಡಾವಣೆಗಳಿಗೆ ತೆರಳುವ ಮೂಲಕ ಕಾಂಗ್ರೆಸ್ ನಡಿಗೆ ಮನೆಮನೆ ಕಡೆಗೆ ಅಭಿಯಾನವನ್ನು ಯಶಸ್ವಿಗೊಳಿ ಸಲಾಗುವದೆಂದು ತಿಳಿಸಿದರು.
(ಮೊದಲ ಪುಟದಿಂದ) ಪಕ್ಷದ ಹಿರಿಯ ಮುಖಂಡರಾದ ಮಿಟ್ಟುಚಂಗಪ್ಪ, ನಗರಸಭಾ ಅಧ್ಯಕ್ಷೆÀ ಕಾವೇರಮ್ಮ ಸೋಮಣ್ಣ, ಸದಸ್ಯ ಪ್ರಕಾಶ್ ಆಚಾರ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿದೇವಯ್ಯ, ಮಾಜಿ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಪಾರ್ವತಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕಿ ತೆನ್ನಿರ ಮೈನಾ ಮತ್ತಿತರ ಪ್ರಮುಖರು ನಗರ ವ್ಯಾಪಿ ಸಂಚರಿಸಿ ಸರಕಾರದ ಸಾಧನೆಯ ಕೈಪಿಡಿಯನ್ನು ಸಾರ್ವಜನಿಕರಿಗೆ ನೀಡಿದರು.