ಸೋಮವಾರಪೇಟೆ, ಅ.6: ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಂಸ್ಕøತಿ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಸಮಾಜ ಚಿಂತಿಸಬೇಕಾದ ಅನಿವಾರ್ಯತೆ ಇದೆ ಎಂದು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಶ್ರೀ ಕುಮಾರೇಶ್ವರ ಜಯಂತಿ ಮಹೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಕೊಡ್ಲಿಪೇಟೆಯ ಶ್ರೀ ಶಿವಕುಮಾರ ಸ್ವಾಮೀಜಿ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಾನಗಲ್ಲ ಶ್ರೀ ಕುಮಾರ ಮಹಾ ಶಿವಯೋಗಿಗಳ 150ನೇ ಜನ್ಮ ದಿನಾಚರಣೆ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮದ್ದಿನ ಕಟ್ಟೆ ಮಠಾಧೀಶ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ 19ನೇ ಶತಮಾನದಲ್ಲಿ ಶ್ರೀ ಕುಮಾರ ಶಿವಯೋಗಿಗಳು ಸಮಾಜದಲ್ಲಿ ನಡೆಯುತಿದ್ದ ಕಂದಾಚಾರ, ಅಸಮಾನತೆಯ ವಿರುದ್ಧ ಸಮರವನ್ನೇ ಸಾರಿದ್ದರು ಎಂದರು.

ಮಹಾರಾಷ್ಟ್ರದ ಅಕ್ಕಲಕೋಟೆ ಮಠಾಧೀಶ ಶ್ರೀ ಚನ್ನಬಸವ ದೇವರು ಸ್ವಾಮೀಜಿ, ಬೆಳಗಾಂ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆ ಬೂದಿಹಾಳ್ ಮಠದ ಶ್ರೀಸಂಗಮೇಶ್ವರ ದೇವರು ಸ್ವಾಮೀಜಿ, ಕೊಡ್ಲಿಪೇಟೆ ವೀರಶೈವ ಸಮಾಜದ ಅಧ್ಯಕ್ಷ ಯತೀಶ್, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಪ್ರೇಮನಾಥ್, ಖಜಾಂಚಿ ಡಿ.ಬಿ.ಸೋಮಪ್ಪ, ಶಾಲಾ ಮುಖ್ಯೋಪಾಧ್ಯಾಯ ಅಭಿಲಾಷ್, ಪ್ರಮುಖರಾದ ಶಾಂತಮಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು.