ಕುಶಾಲನಗರ, ಅ. 8 : ವನ್ಯಜೀವಿ ಸಪ್ತಾಹ ಅಂಗವಾಗಿ ಶಾಲಾ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವವೈವಿಧ್ಯಗಳ ಚಿತ್ತಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊಡಗು ವೃತ್ತದ ಅರಣ್ಯ ಇಲಾಖೆ ಆಶ್ರಯದಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಸಹಯೋಗದೊಂದಿಗೆ ಸ್ಥಳೀಯ ಕಾವೇರಿ ನಿಸರ್ಗಧಾಮದಲ್ಲಿ ವಿದ್ಯಾರ್ಥಿ ಗಳಿಗೆ ಅರಣ್ಯ ವನ್ಯಜೀವಿ ಹಾಗೂ ಸಂರಕ್ಷಣೆಗೆ ಸಂಬಂಧಿಸಿದಂತೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಸೋಮವಾರಪೇಟೆ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಿಣ್ಣಪ್ಪ, ಮಡಿಕೇರಿ ವನ್ಯಜೀವಿ ವಿಭಾಗದ ಪಿ.ಎ.ಸೀಮ, ಕುಶಾಲನಗರ ವಲಯ ಅರಣ್ಯಾಧಿಕಾರಿ ಸಿ.ಎ.ಅರುಣ್, ಪ್ರೊಬೆಷನರಿ ವಲಯ ಅರಣ್ಯಾಧಿಕಾರಿ ಬಿ.ಎಂ.ಶೃತಿ ಮತ್ತಿತರರು ಇದ್ದರು.