ವೀರಾಜಪೇಟೆ; ಅ. 8: ಪ್ರತಿಯೊಬ್ಬ ವಿದ್ಯಾರ್ಥಿಯೂ ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳು ವಂತಾಗಬೇಕು ಎಂದು ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ, ಸುಬ್ರಮಣ್ಯ ಹೇಳಿದರು.

ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಗಾಂಧಿಜಯಂತಿ ಪ್ರಯುಕ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಅಹಿಂಸೆ ಮತ್ತು ಸತ್ಯ ಗಾಂಧೀಜಿ ಅವರ ಎರಡು ಅಸ್ತ್ರಗಳಾಗಿದ್ದವು. ಈ ಮೂಲಕವೇ ಅವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ, ಟಿ.ಕೆ. ಬೋಪಯ್ಯ ಮಾತನಾಡಿ ನವ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಎನ್.ಎ.ಎ.ಸಿ.ನ ಸಂಚಾಲಕ ಪ್ರೊ, ವೇಣುಗೋಪಾಲ್ ಹಾಗೂ ಕಾಲೇಜಿನ ಅಧ್ಯಾಪಕರುಗಳು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಪ್ರೊ, ನಾಗರಾಜ ಮೂರ್ತಿ ಮತ್ತು ಪೊ,್ರ ಗುರುಪ್ರಸಾದ್ ನೇತೃತ್ವದಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.