ಕುಶಾಲನಗರ, ಅ. 8: ಸ್ವಚ್ಛತೆಯ ಅರಿವು ಮತ್ತು ಜಾಗೃತಿ ಮನೆಯಿಂದ ಪ್ರಾರಂಭಗೊಳ್ಳಬೇಕಿದೆ ಎಂದು ಹಿರಿಯ ಅರ್ಚಕ ಕೃಷ್ಣಮೂರ್ತಿ ಭಟ್ ತಿಳಿಸಿದ್ದಾರೆ.

ಶೀಗಿ ಹುಣ್ಣಿಮೆ ಅಂಗವಾಗಿ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಮಾತೆ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 71ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಹಾ ಆರತಿ ಅಂಗವಾಗಿ ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. 7ನೇ ಕಾವೇರಿ ಜಾಗೃತಿ ರಥಯಾತ್ರೆ ತಾ. 22 ರಂದು ತಲಕಾವೇರಿಯಿಂದ ಚಾಲನೆಗೊಂಡು ಸಮುದ್ರ ಸಂಗಮ ಸ್ಥಳವಾದ ಪೂಂಪ್‍ಹಾರ್‍ನಲ್ಲಿ ನವೆಂಬರ್ 13 ಕ್ಕೆ ಸಮಾರೋಪಗೊಳ್ಳಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರ ಮೋಹನ್ ಮಾಹಿತಿ ಒದಗಿಸಿದರು.

ಕಾರ್ಯಕ್ರಮದಲ್ಲಿ ಆರತಿ ಬಳಗದ ಪ್ರಮುಖರಾದ ಡಿ.ಆರ್. ಸೋಮಶೇಖರ್, ಬಿ.ಜಿ.ಅಣ್ಣಯ್ಯ ಮತ್ತಿತರರು ಇದ್ದರು.

ಕುಶಾಲನಗರ ಕೊಪ್ಪ ಸೇತುವೆ ಬಳಿ ಬಾರವಿ ಕನ್ನಡ ಸಂಘದ ಆಶ್ರಯದಲ್ಲಿ ಕಾವೇರಿ ಪ್ರತಿಮೆಗೆ ಅಭಿಷೇಕ, ಆರತಿ ಕಾರ್ಯಕ್ರಮಗಳು ಜರುಗಿದವು.