ಸಿದ್ದಾಪುರ, ಅ. 8: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಸಿದ್ದಾಪುರದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ ಹಸೈನಾರ್ ಹಾಜಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‍ರವರ ನಿರ್ದೇಶನದ ಮೇರೆಗೆ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ವೈ. ಸೈಯದ್ ಅಹಮ್ಮದ್ ಅವರು ಪಿ.ಸಿ. ಹಸೈನಾರ್ ಹಾಜಿರವರನ್ನು ಉಪಾಧ್ಯಕ್ಷರಾಗಿ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ.ಹಸೈನಾರ್‍ರವರು 1970 ರಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿ ಕೊಂಡಿದ್ದು, ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಡಿ.ಸಿ.ಸಿ ಸದಸ್ಯರಾಗಿ, ಅಲ್ಪಸಂಖ್ಯಾತ ಘಟಕದ ಖಜಾಂಚಿ ಸೇರಿದಂತೆ ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಪಿ.ಸಿ. ಹಸೈನಾರ್ ಹಾಜಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‍ರವರ ನಿರ್ದೇಶನದ ಮೇರೆಗೆ ತನ್ನನ್ನು ಅಲ್ಪಸಂಖ್ಯಾತ ಘಟದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಳಿಸಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು

(ಮೊದಲ ಪುಟದಿಂದ) ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮಿಸುವದಾಗಿ ಹಾಗೂ ಅಲ್ಪಸಂಖ್ಯಾತರನ್ನು ಒಗ್ಗೂಡಿಸಿ ಪಕ್ಷವನ್ನು ಬೆಳೆಸುವದಾಗಿ ಅವರು ತಿಳಿಸಿದರು. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‍ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವದು ಖಚಿತ. ರಾಜ್ಯ ಸರಕಾರ ಬಡವರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಪರ ಆಡಳಿತ ನಡೆಸುತ್ತಿದೆ. ಹಸಿವು ಮುಕ್ತ ಕರ್ನಾಟಕದ ನಿರ್ಮಾಣ ಮಾಡಿದ್ದು, ಜನರು ಕಾಂಗ್ರೆಸ್ ಪರವಾಗಿದ್ದಾರೆ ಎಂದರು.