ಸಿದ್ದಾಪುರ, ಅ. 8: ಸಿದ್ದಾಪುರ ಕೈರಳಿ ಸಮಾಜದ ವತಿಯಿಂದ 10ನೇ ವರ್ಷದ ಓಣಂ ಹಬ್ಬವನ್ನು ಸಿದ್ದಾಪುರದ ಸ್ವರ್ಣಮಾಲ ಸಭಾಂಗಣದಲ್ಲಿ ತಾ. 12 ರಂದು ಆಚರಿಸಲಾಗುವದೆಂದು ಓಣಂ ಆಚರಣೆಯ ಸಮಿತಿಯ ಅಧ್ಯಕ್ಷ ವಿ.ಕೆ. ಲೋಕೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 12 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀಧರನ್ ಮಾಸ್ಟರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಹೂವಿನ ರಂಗೋಲಿ ಸ್ಪಧೆರ್Éಯನ್ನು ಎಂ.ಕೆ. ಪ್ರತ್ಯುಪ್ನ ಉದ್ಘಾಟಿಸಲಿದ್ದಾರೆ. ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಪಾಲ್ಗೊಂಡ ವಿಜೇತರಿಗೆ ಪ್ರಥಮ ಬಹುಮಾನ 2 ಗ್ರಾಂ. ಚಿನ್ನದ ನಾಣ್ಯ, ದ್ವಿತೀಯ ಬಹುಮಾನ 1 ಗ್ರಾಂ. ಚಿನ್ನದ ನಾಣ್ಯ, ತೃತೀಯ ಬಹುಮಾನ 1/2 ಗ್ರಾಂ. ಚಿನ್ನದ ನಾಣ್ಯಗಳನ್ನು ನೀಡಲಾಗುವದು ಎಂದು ಮಾಹಿತಿ ನೀಡಿದರು. ನಂತರ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೈರಳಿ ಸಮಾಜದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ‘ಶಕಿ’್ತ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಕೊಡಗು ಪ್ರೆಸ್‍ಕ್ಲಬ್ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಕೇಚಮಾಡ ಸರಿತಾ ಪೂಣಚ್ಚ, ತಾಲೂಕು ಪಂಚಾಯಿತಿ ಸದಸ್ಯ ಕೆ.ಎಂ. ಜನೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ. ಮಣಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಿದ್ದಾಪುರ ಕೈರಳಿ ಸಮಾಜದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್ ಮಾತನಾಡಿ, 10ನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಅಧಿಕ ಅಂಕಗಳಿಸಿದ ಸಮಾಜ ಬಾಂಧವರ ಮಕ್ಕಳನ್ನು ಪ್ರೋತ್ಸಾಹಿಸಲಾಗುವದು. ಹಿರಿಯ ನಾಗರಿಕರನ್ನು ಸನ್ಮಾನಿಸಲಾಗುವದೆಂದರು. ಅಪರಾಹ್ನ 2 ಗಂಟೆಗೆ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು ಮೋಹಿನಿಯಾಟಂ, ತಿರುವಾದಿರಕಳಿ, ಸಿನಿಮ್ಯಾಟಿಕ್ ಡ್ಯಾನ್ಸ್ ನಡೆಯಲಿದೆ. ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ರೀತಿಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ಕೇರಳದ ಪ್ರಖ್ಯಾತ ರಸಮಂಜರಿ ತಂಡದಿಂದ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕೈರಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಗಿರೀಶ್ ಮಟ್ಟ, ಸಂಘಟನ ಕಾರ್ಯದರ್ಶಿ ದಿಲೀಪ್, ಆಚರಣ ಸಮಿತಿಯ ಸದಸ್ಯ ಎಂ.ಎ. ಆನಂದ ಹಾಜರಿದ್ದರು.