ಕೂಡಿಗೆ, ಅ. 9 : ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ತಾ 10 (ಇಂದು) ಮತ್ತು 11 ರಂದು ಕೂಡಿಗೆಯ ಆಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

ತಾ. 10 ರಂದು ನಡೆಯಲಿರುವ ಪ್ರಾಥಮಿಕ ಶಾಲಾ ವಿಭಾಗದ ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿಗೋಪಾಲ್ ಉದ್ಘಾಟಿಸಲಿದ್ದಾರೆ.

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್.ಶ್ರೀನಿವಾಸ್, ಮತ್ತಿತರರು ಅತಿಥಿಗಳಾಗಿ ಆಗಮಿಸಲಿದ್ದಾರೆ.

ತಾ. 11 ರಂದು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಮೂಕೊಂಡ ಪಿ.ಸುಬ್ರಮಣಿ ಉದ್ಘಾಟಿಸಲಿದ್ದಾರೆ.

ಎಂ. ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಾ. ಪಂ. ಅಧ್ಯಕ್ಷ ಪುಷ್ಪ ರಾಜೇಶ್, ಉಪಾಧ್ಯಕ್ಷ ಎಂ. ಬಿ. ಅಭಿಮನ್ಯಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.