ಮಡಿಕೇರಿ, ಅ. 10: ಜಿ.ಪಂ., ಆಯುಷ್ ಇಲಾಖೆ ಇವರ ವತಿಯಿಂದ ಟಿ.ಎಸ್.ಪಿ., ಎಸ್.ಸಿ.ಪಿ ತಾಲೂಕು ಮಟ್ಟದ ಆಯುಷ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಹಾಗೂ ಆಯುರ್ವೇದ ದಿನಾಚರಣೆ ತಾ. 11 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಅಶ್ವಿನಿ ಅಸ್ಪತ್ರೆ ಸಭಾ ಭವನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಹಾಮಂಡಳಿ ನಿಗಮ ನಿಯಮಿತದ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಮಡಿಕೇರಿ ಅಶ್ವಿನಿ ಆಸ್ಪತ್ರೆಯ ಡಾ. ಪ್ರಕಾಶ್ ಕುಲಕರ್ಣಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಹೆಚ್. ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮುಮ್ತಾಜ್, ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಇತರರು ಪಾಲ್ಗೊಳ್ಳಲಿದ್ದಾರೆ.