ಸುಂಟಿಕೊಪ್ಪ, ಅ. 10: ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ, ಪ್ರತಿಯೊಬ್ಬರೂ ಕುಡಿತವನ್ನು ಬಿಟ್ಟು ಹಸನ್ಮುಖರಾಗಬೇಕು ಎಂದು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯದ ಪರಿಹಾರ ವೇದಿಕೆಯ ಅಧ್ಯಕ್ಷ ಎ. ಲೋಕೇಶ್ ಕುಮಾರ್ ಅಭಿಪ್ರಾಯಪಟ್ಟರು.
ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಗ್ರಾಮ ಪಂಚಾಯಿತಿ, ಸುಂಟಿಕೊಪ್ಪ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಇಲ್ಲಿನ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಮಂಗಳವಾg Àದಿಂದ ಎಂಟು ದಿನಗಳ ಕಾಲ ನಡೆಯಲಿರುವ 1137ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಂತ ವೈದ್ಯ ಡಾ. ಶಶಿಕಾಂತ್ ರೈ ಮಾತನಾಡಿ, ಸರ್ಕಾರಗಳು ತಮ್ಮ ಆದಾಯಕ್ಕಾಗಿ ಮದ್ಯಪಾನವನ್ನು ನಿಷೇಧಿಸದೇ ಇರುವದು ಸಮಾಜಕ್ಕೆ ಕಂಠಕವಾಗಿ ಪರಿಣಮಿಸಿದೆ ಎಂದರು.
ಶಿಬಿರಾಧಿಕಾರಿ ಬಾಸ್ಕರ್, ಮಕ್ಕಂದೂರು ಬೆಳೆಗಾರ ಅಜಯ್ ಸೂದ್, ಸೋಮವಾರಪೇಟೆ ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ವೈ.ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಣಿ, ಏಳನೇ ಹೊಸಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಮಂಜುನಾಥ್ ಮಾತನಾಡಿ ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ವಹಿಸಿದ್ದರು.
ವೇದಿಕೆಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಆರ್. ಕೃಷ್ಣ ಭಟ್, ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷ ಅಬ್ಬಾಸ್, ಜೆಸಿಐನ ಮಾಜಿ ಅಧ್ಯಕ್ಷ ಸದಾಶಿವ ರೈ, ಗ್ರಾ.ಪಂ. ಸದಸ್ಯರಾದ ಎ. ಶ್ರೀದರ್ ಕುಮಾರ್, ಬಿ.ಎಂ. ಸುರೇಶ್, ಬಿಜೆಪಿ ನಗರಾಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಂಜಿತ್ ಪೂಜಾರಿ, ಕೆದಕಲ್ ಗ್ರಾ.ಪಂ. ಮಾಜಿ ಅಧ್ಯಕ್ಷೆ ಮಧುನಾಗಪ್ಪ ಇತರರು ಇದ್ದರು.