ಕೂಡಿಗೆ, ಅ. 10: ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಸೋಮವಾರಪೇಟೆ ತಾಲೂಕು ಇವರ ಸಂಯುಕ್ತಾಶ್ರಯ ದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ಕೂಡಿಗೆಯ ಆಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಸದಸ್ಯೆ ಸಬಿತಾ ಚೆನ್ನಕೇಶವ ಉದ್ಘಾಟಿಸಿ ನಂತರ ಮಾತನಾಡಿದರು. ಕ್ಷೇತ್ರದ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಹೆಚ್.ಎಸ್. ಚೇತನ್, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೂಡಿಗೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲ ಮಾತನಾಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಮಾಲತಿ, ತಾಲ್ಲೂಕು ಶಿಕ್ಷಣ ಸಂಯೋಜಕ ವಸಂತ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಉಪಾಧ್ಯಕ್ಷ ಕೆ.ಬಿ. ಪ್ರಕಾಶ್, ಅಂಜೆಲಾ ವಿದ್ಯಾನಿಕೇತನ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ವೀಣಾ ವಿಜಯ್ ಕ್ಯಾಸ್ಟಲಿನೋ, ತಾಲೂಕು ಶಿಕ್ಷಕ ಸಂಘದ ನಿರ್ದೇಶಕ ರಾಜಪ್ಪ ಚಂದ್ರಶೇಖರ್, ಡಯಟ್ ಉಪನ್ಯಾಸಕ ಸಿದ್ದೇಶ್ ಇದ್ದರು.