ಮಡಿಕೇರಿ, ಅ. 12: ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಅರುಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 2017-18 ನೇ ಸಾಲಿನ ಎನ್.ಎಸ್.ಎಸ್. ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಸಣ್ಣಪುಲಿಕೋಟುವಿನ ಮೇಲುಕಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ವಿದ್ಯಾರ್ಥಿಗಳು’ ಎಂಬ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು ಅರುಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎ. ಶ್ರೀಪ್ರಕಾಶ್ ವಹಿಸಿದ್ದು, ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಸಾಮಾಜಿಕ ಕಳಕಳಿಯನ್ನು ಕೂಡ ತೋರಬೇಕೆಂದರು.
ವಿಶೇಷ ಆಹ್ವಾನಿತರಾಗಿ ವಿಜಯಲಕ್ಷ್ಮೀ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಕುಯ್ಯಮುಡಿ ಅಶ್ವಿನಿ ಕುಮಾರ್, ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕ್ಷೇತ್ರದ ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಮಾಜಿ ಗ್ರಾ.ಪಂ. ಅಧ್ಯಕ್ಷ ಆಚೀರ ನಾಣಯ್ಯ, ಅಯ್ಯಂಗೇರಿ ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಸದಸ್ಯರುಗಳಾದ ಸುಮಿತ್ರ, ಕುಯ್ಯಮುಡಿ ಮನೋಜ್ ಕುಮಾರ್, ಪಿ.ಡಿ.ಓ. ಅಶೋಕ್ ಕುಮಾರ್, ತಾ.ಪಂ. ಸದಸ್ಯೆ ಸಂಧ್ಯಾ, ಅರುಣ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎನ್. ಮಹದೇವು, ಮೇಲುಕಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮತ್ತಿತರ ಪ್ರಮುಖರು ಹಾಜರಿದ್ದರು.