ಸೋಮವಾರಪೇಟೆ, ಅ. 12: ತಾಲೂಕಿನ ಶನಿವಾರಸಂತೆ ನಾಡಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಪೋಷಿಸಲು ಕೆಲವರು ಮುಂದಾಗಿರುವದು ಖಂಡನೀಯ ಎಂದು ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಅಭಿಪ್ರಾಯಿಸಿದ್ದಾರೆ.
ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ನಿರ್ವಾಣಪ್ಪ, ತಾಲೂಕು ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಾವುಗಳು ಶನಿವಾರಸಂತೆ ನಾಡಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಬೇಕಾದ ನೌಕರರು ಕೆಲವರನ್ನು ಬಳಸಿಕೊಂಡು ಸುಳ್ಳು ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ದಲಿತ ಸಂಘಟನೆಯ ಸೋಮವಾರಪೇಟೆ, ಅ. 12: ತಾಲೂಕಿನ ಶನಿವಾರಸಂತೆ ನಾಡಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಪೋಷಿಸಲು ಕೆಲವರು ಮುಂದಾಗಿರುವದು ಖಂಡನೀಯ ಎಂದು ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಅಭಿಪ್ರಾಯಿಸಿದ್ದಾರೆ.
ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ನಿರ್ವಾಣಪ್ಪ, ತಾಲೂಕು ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಾವುಗಳು ಶನಿವಾರಸಂತೆ ನಾಡಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಬೇಕಾದ ನೌಕರರು ಕೆಲವರನ್ನು ಬಳಸಿಕೊಂಡು ಸುಳ್ಳು ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ದಲಿತ ಸಂಘಟನೆಯ ಸಮ್ಮುಖದಲ್ಲೇ ಬಿಡಿಸಿಕೊಡಲಾಗಿದೆ. ಓಡಾಟದ ಖರ್ಚಿಗೆಂದು ನೂರು-ಇನ್ನೂರು ರೂಪಾಯಿ ಸ್ವಯಂಪ್ರೇರಿತರಾಗಿ ಖರ್ಚು ಮಾಡಿದ್ದಾರೆಯೇ ಹೊರತು ಅವರಿಂದ ನಾವುಗಳು ಸಾವಿರಾರು ರೂಪಾಯಿ ಪಡೆದಿಲ್ಲ. ಈಕೆಯನ್ನು ನಮ್ಮ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ನಿರ್ವಾಣಪ್ಪ ಸ್ಪಷ್ಟನೆ ನೀಡಿದರು.
ತನ್ನ ಆದಾಯದ ಬಗ್ಗೆ ಜಿಲ್ಲೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಗೆ ಸ್ಪಷ್ಟ ಮಾಹಿತಿ ಇದೆ ಎಂದ ಅವರು, ಸಂಘಟನೆಯ ಮೂಲಕ ಅನ್ಯಾಯವನ್ನು ತಟ್ಟಿಕೇಳುವ ಕೆಲಸವನ್ನು ಮಾಡುತ್ತಿದ್ದೇವೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಗ್ರಾಮ ಸಹಾಯಕರನ್ನು ಹಾಗೂ ಇವುಗಳಿಗೆ ಕಡಿವಾಣ ಹಾಕುವಲ್ಲಿ ವಿಫಲರಾಗಿರುವ ಕಂದಾಯ ನಿರೀಕ್ಷಕರನ್ನು ತಕ್ಷಣ ಅಲ್ಲಿಂದ ವರ್ಗಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಗೋಷ್ಠಿಯಲ್ಲಿದ್ದ ಜಿ.ಪಂ. ಮಾಜೀ ಅಧ್ಯಕ್ಷೆ ಜಯಮ್ಮ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಸಂದರ್ಭ ಅಧಿಕಾರಿಗಳು ಹಣ ನೀಡಿ ಕೆಲವರನ್ನು ಕಚೇರಿಗೆ ಕರೆಸಿಕೊಂಡು ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಗೋಷ್ಠಿಯಲ್ಲಿ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್. ಮಂಜುನಾಥ್, ಟಿಯುಸಿಐ ಕಾರ್ಮಿಕ ಸಂಘಟನೆಯ ಸಣ್ಣಪ್ಪ, ರೈತ ಸಂಘದ ಎಂ.ಎಂ. ಸಿದ್ದಯ್ಯ, ಕೊಮಾರಪ್ಪ, ದೊಡ್ಡಳ್ಳಿ ರುದ್ರಯ್ಯ ಅವರುಗಳು ಉಪಸ್ಥಿತರಿದ್ದರು.