ನಾಪೆÇೀಕ್ಲು, ಅ. 13: ವಿದ್ಯಾರ್ಥಿಗಳು ಬರೀ ಅಂಕ ಗಳಿಕೆಯ ಉದ್ದೇಶದಿಂದ ವಿದ್ಯಾಭ್ಯಾಸ ಮಾಡಬಾರದು. ಇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಚಾರಿತ್ರ್ಯವಂತರಾದರೆ ಸಾಧನೆ ಸಾಧ್ಯ ಎಂದು ಲಯನ್ಸ್ ಕ್ಲಬ್ನ ಪ್ರಾದೇಶಿಕ ಅಧ್ಯಕ್ಷೆ ಕೇಟೋಳಿರ ರತ್ನಾ ಚರ್ಮಣ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಾರಾಣೆ ಪ್ರೌಢಶಾಲೆಯಲ್ಲಿ ನಾಪೆÇೀಕ್ಲು ಲಯನ್ಸ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಸ್ವಚ್ಛತಾ ಆಂದೋಲನ ಮತ್ತು ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳನ್ನು ಅರಿತಿರಬೇಕು. ತಮ್ಮ ಅಭಿರುಚಿಗನುಗುಣವಾಗಿ ಸಾಧನೆಯ ಬೆನ್ನೇರಿ ಸಫಲತೆಯನ್ನು ಕಾಣಬೇಕು ಎಂದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸದಸ್ಯ ಎಳ್ತಂಡ ಬೋಪಣ್ಣ ಎರಡು ಮತ್ತು ಕೇಟೋಳಿರ ಎಸ್. ಕುಟ್ಟಪ್ಪ ಒಂದು ಉತ್ತಮ ದರ್ಜೆಯ ಕಸದ ತೊಟ್ಟಿಯನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ವನಮಹೋತ್ಸವಕ್ಕೆ ಲಯನ್ಸ್ ಕ್ಲಬ್ನ ಕಾರ್ಯದರ್ಶಿ ಮುಕ್ಕಾಟಿರ ವಿನಯ್ ಉಚಿತವಾಗಿ ಗಿಡಗಳನ್ನು ನೀಡಿದರು. ನಾಪೆÇೀಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಕೋಟೆರ ಪಂಚಮ್ ತಿಮ್ಮಯ್ಯ ಗಿಡಗಳನ್ನು ನೆಡುವದರ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪೆಬ್ಬಾಟಂಡ ಪೆಮ್ಮಯ್ಯ ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸದಸ್ಯರಾದ ಬೊಪ್ಪಂಡ ಡಾ. ಜಾಲಿ ಬೋಪಯ್ಯ, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಚೌರೀರ ಉದಯ, ಅಪ್ಪಾರಂಡ ಸುಭಾಷ್ ತಿಮ್ಮಯ್ಯ, ಕೊಂಬಂಡ ಗಣೇಶ್, ಬಿದ್ದಾಟಂಡ ವಿವೇಕ್, ಶಾಲಾ ಮುಖ್ಯ ಶಿಕ್ಷಕಿ ಮುಕ್ಕಾಟಿರ ರಜನಿ, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಇದ್ದರು.