ಸುಂಟಿಕೊಪ್ಪ, ಅ. 13: ಮಾನವನ ಶರೀರ ಹಲವು ವಸ್ತುಗಳನ್ನು ಉತ್ಪಾದಿಸುವ ಕಾರ್ಖಾನೆಯಾಗಿದೆ, ಸಂತೋಷ ನಮ್ಮ ಶರೀರದಲ್ಲೇ ಇದೆ. ಅದನ್ನು ಸರಿಯಾದ ರೀತಿ ಬಳಕೆ ಮಾಡಿಕೊಂಡರೆ ಮದ್ಯಪಾನ ವ್ಯಸನವನ್ನು ತ್ಯಜಿಸಬಹುದು ಎಂದು ಇಲ್ಲಿನ ಧರ್ಮಗುರು ಎಡ್ವರ್ಡ್ ವಿಲಿಯಂ ಸಾಲ್ಡಾನ ಹೇಳಿದರು.ಇಲ್ಲಿನ ಶ್ರೀ ರಾಮ ಸೇವಾ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜ&divound;,É ಸೋಮವಾರಪೇಟೆ ಜನಜಾಗೃತಿ ವೇದಿಕೆ, ಮದ್ಯಪಾನ ಸಂಯಮ ಮಂಡಳಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 1137ನೇ ಮದ್ಯವರ್ಜನ ಶಿಬಿರದಲ್ಲಿ 3ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಸಮಸ್ಯೆ ಇದೆ ಎಂದು ಕುಡಿತಕ್ಕೆ ದಾಸರಾಗುವದರಿಂದ ಸಮಸ್ಯೆಗೆ ಪರಿಹಾರ ಅಲ್ಲ. ಸಮಸ್ಯೆಯನ್ನು ದಿಟ್ಟತನದಿಂದ ಎದುರಿಸುವ ಮನೋಸ್ಥೈರ್ಯವನ್ನು ರೂಢಿಸಿಕೊಳ್ಳಬೇಕು ಎಂದರು.

ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ, ಕೂಡಿಗೆ ಗ್ರಾ.ಪಂ. ಸದಸ್ಯ ಈರಪ್ಪ, ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ಸಿ.ಡಿ.ಆರ್.ಸಂಯೋಜಕ ಮುರುಗೇಶ್ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಳ್ಳಿ ಮೇಲ್ವಿಚಾರಕಿ ರೇವತಿ, ನಾಕೂರು ಶಿರಂಗಾಲ ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸಲಹೆಯನ್ನು ನೀಡಿದರು.