ಸೋಮವಾರಪೇಟೆ, ಅ.15: ಮಾದಾಪುರ ಡಿ. ಚನ್ನಮ್ಮ ಪದವಿ ಪೂರ್ವ ಕಾಲೇಜಿನ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ ತಾ. 16ರಿಂದ (ಇಂದಿನಿಂದ) ತಾ. 22ರವರೆಗೆ ಕುಂಬೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ತಾ. 16ರಂದು ಅಪರಾಹ್ನ 2.30ಕ್ಕೆ ಶಿಬಿರ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆನ್ನಮ್ಮ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಬಿಜಿವಿ ಕುಮಾರ್ ವಹಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಶಿಬಿರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಾಳಗಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯೆ ಕುಮುದ ಧರ್ಮಪ್ಪ, ಗ್ರಾ.ಪಂ. ಅಧ್ಯಕ್ಷೆ ಲತಾ ನಾಗರಾಜ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ತಾ. 22ರಂದು ಪೂರ್ವಾಹ್ನ 11 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ವನೀತ್‍ಕುಮಾರ್, ಮಾಜೀ ಸಚಿವ ಬಿ.ಎ. ಜೀವಿಜಯ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಹರದೂರು ಗ್ರಾ.ಪಂ. ಅಧ್ಯಕ್ಷೆ ಶೈಲಜಾ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಶಿಬಿರಾಧಿಕಾರಿ ಮೋಹನ್ ಹೆಗ್ಡೆ, ಸಹ ಶಿಬಿರಾಧಿಕಾರಿಗಳಾದ ಎನ್.ಎನ್. ಮನೋಹರ್, ರಮ್ಯ ಅವರುಗಳ ಉಸ್ತುವಾರಿಯಲ್ಲಿ ಒಂದು ವಾರಗಳ ಕಾಲ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ನಡೆಯಲಿದ್ದು, ಪ್ರತಿದಿನ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ತರಬೇತಿ, ಮಾರ್ಗದರ್ಶನ ನೀಡಲಿದ್ದಾರೆ.