ಗೋಣಿಕೊಪ್ಪಲು, ಅ. 15: ತಾ. 21 ಹಾಗೂ 22 ರಂದು ರಾಜ್ಯಮಟ್ಟದ ಪದವಿಪೂರ್ವ ಬಾಲಕ, ಬಾಲಕಿಯರ ಫ್ಲೋರ್‍ಬಾಲ್ ಕ್ರೀಡಾಕೂಟ ಗೋಣಿಕೊಪ್ಪ ಕಾವೇರಿ ಕಾಲೇಜು ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಫ್ಲೋರ್‍ಬಾಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಮಿನ್ನಂಡ ಜೋಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಫ್ಲೋರ್‍ಬಾಲ್ ಅಸೋಸಿ ಯೇಷನ್, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾವೇರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆಯುವ 3 ನೇ ವರ್ಷದ ಕ್ರೀಡಾಕೂಟದಲ್ಲಿ ಸುಮಾರು 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

19 ವರ್ಷದೊಳಗಿನ ಕ್ರೀಡಾ ಪಟುಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉತ್ತಮ ಆಟ ಪ್ರದರ್ಶಿಸಿದ ತಂಡವನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗುವದು. 15 ಬಾಲಕರು, 13 ಬಾಲಕಿಯರ ತಂಡ ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಕಳೆದ ಬಾರಿ 22 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿಯೂ ಕೂಡ ರಾಜ್ಯದ ವಿವಿಧ ಜಿಲ್ಲೆಗಳಿಂದ ತಂಡಗಳು ಪಾಲ್ಗೊಳ್ಳುತ್ತಿವೆ ಎಂದರು. ಸುಮಾರು 1.5 ಲಕ್ಷ ವೆಚ್ಚದಲ್ಲಿ ಟೂರ್ನಿ ನಡೆಯಲಿದೆ ಎಂದರು. ಟೂರ್ನಿ ಸಂದರ್ಭ ವೀಕ್ಷಕರುಗಳಾಗಿ ಪಿಯು ವಿಭಾಗದಿಂದ ಹಜಾರೆ ಹಾಗೂ ತಿಪ್ಪಣ್ಣ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ರಾಷ್ಟ್ರಮಟ್ಟಕ್ಕೆ ಆಯ್ಕೆ ನಡೆಯಲಿದೆ. ಗೋಣಿಕೊಪ್ಪ ಕಾವೇರಿ ಕಾಲೇಜುವಿ ನಿಂದ ಈಗಾಗಲೇ 2 ಆಟಗಾರರು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. 29 ಕ್ರೀಡಾಪಟುಗಳ ರಾಷ್ಟ್ರಮಟ್ಟದಲ್ಲಿ ಪಾಲ್ಗೊಂಡಿದ್ದಾರೆ ಎಂದರು. ಗೋಷ್ಠಿಯಲ್ಲಿ ಕಾವೇರಿ ಪಿಯು ವಿಭಾಗದ ದೈಹಿಕ ನಿರ್ದೇಶಕ ಸಂತೋಶ್ ಹಾಗೂ ಉಪನ್ಯಾಸಕ ಬ್ರೈಟಾ ಉಪಸ್ಥಿತರಿದ್ದರು.