ಮಡಿಕೇರಿ, ಅ. 15: ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರವಾದ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ‘ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ’ ಕಾರ್ಯಕ್ರಮ ಜಿಲ್ಲಾ ಕೇಂದ್ರ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದು, ನಗರ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಗಣಪತಿಬೀದಿ ಸುತ್ತಮುತ್ತಲ ವಿಭಾಗಗಳ ನಿವಾಸಿಗಳನ್ನು ಭೇಟಿ ಮಾಡಿ ಪಕ್ಷದ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಲಾಯಿತು.

ಮಡಿಕೆÉೀರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ನೇತೃತ್ವದಲ್ಲಿ ಬೆಳಿಗ್ಗೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ನಗರದ ಇಂದಿರಾ ಗಾಂಧಿ ವೃತ್ತದಿಂದ, ಗಣಪತಿ ಬೀದಿ, ಎ.ವಿ. ಶಾಲೆ, ಶ್ರೀ ಮುತ್ತಪ್ಪ ದೇವಸ್ಥಾನದ ಆಸುಪಾಸಿನ ನೂರಾರು ನಿವಾಸಿಗಳನ್ನು ಭೇಟಿ ಮಾಡಿ, ಸರ್ಕಾರದ ಸಾಧನೆಗಳ ಪÀÅಸ್ತಕವನ್ನು ನೀಡುವ ಮೂಲಕ, ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ಇಂದು ನಡೆದ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಕಾಂಗ್ರೆಸ್ ನಗರಾಧ್ಯಕ್ಷ ಅಬ್ದಲ್ ರಜಾಕ್, ನಗರಸಭಾ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ತಜಸುಂ, ನಾಮನಿರ್ದೇಶಿತ ಸದಸ್ಯರುಗಳಾದ ಯತೀಶ್ ಕುಮಾರ್, ಎಂ.ಎ.ಉಸ್ಮಾನ್, ವೆಂಕಟೇಶ್, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ರಾನ್ಸಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ನಗರಸಭಾ ಮಾಜಿ ಸದಸ್ಯ ಸುನಿಲ್ ನಂಜಪ್ಪ, ಪಕ್ಷದ ಪ್ರಮುಖರಾದ ಮಂಡೀರ ಜಗದೀಶ್, ಎಂ.ಹೆಚ್. ಜಫ್ರುಲ್ಲ, ಮುನೀರ್ ಮಾಚಾರ್, ಮೊಹಮ್ಮದ್, ಟಿ.ಪಿ. ನಾಣಯ್ಯ, ಸದಾ ಮುದ್ದಪ್ಪ, ಇಸ್ಮಾಯಿಲ್ ಸೇರಿದಂತೆ ಹಲ ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.