ಕುಶಾಲನಗರ, ಅ 16: ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಕುಶಾಲನಗರದಲ್ಲಿ ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ನಡೆದ ಜಾಥಾಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರು ಈ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ aಗಳನ್ನು ಸರಕಾರಿ ಕಾರ್ಯಕ್ರಮ ಎಂದು ಭಾವಿಸಿಕೊಳ್ಳದೆ ಪ್ರತಿಯೊಬ್ಬರೂ ಪಾಲ್ಗೊಳ್ಳ ಬೇಕೆಂದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಿತ್ತಿಪತ್ರಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಘೋಷಣೆ ಕೂಗಿದರು.
ಸ್ಥಳೀಯ ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ದಲ್ಲಿ ಉಪನ್ಯಾಸಕ ಜಯಕುಮಾರ್ ಮಾತನಾಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್. ಕೆ. ಶಾಂತಿ, ಸಹಾಯಕ ಠಾಣಾಧಿಕಾರಿ, ಗೀತಾ, ಜಿ.ಪಂ. ಮಾಜಿ ಅಧ್ಯಕ್ಷ ರಾಜಾರಾವ್, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇದ್ದರು.