ಕುಶಾಲನಗರ, ಅ. 19 : ಮಾದಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಕುಶಾಲನಗರ ಜ್ಞಾನಭಾರತಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದೆ. ಈ ತಿಂಗಳ 23 ರಿಂದ ಎರಡು ದಿನಗಳ ಕಾಲ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದೆ.