ಮಡಿಕೇರಿ, ಅ. 20: ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಘ, ನೇತ್ರ ಚಿಕಿತ್ಸಾ ವಿಭಾಗ ಜಿಲ್ಲಾ ಆಸ್ಪತ್ರೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು ಗ್ರಾಮ ಪಂಚಾಯಿತಿ, ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಆದರ್ಶ ಫ್ರೆಂಡ್ಸ್ ಚಡಾವು, ಮಡಿಕೇರಿ ಸ್ಮಿತಾ ಐ ಕೇರ್ ಸೆಂಟರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರೀಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸಂಪಾಜೆ ಅಂಧತ್ವ ನಿವಾರಣಾ ಸಮಿತಿ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ತಾ. 25 ರಂದು ಬೆಳಿಗ್ಗೆ 9.30 ಗಂಟೆಗೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ಕಳಗಿ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಅಮೃತ ಟಿ. ಅಪ್ಪಣ್ಣ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ರೋ. ಅನಿಲ್ ಹೆಚ್.ಟಿ., ಸಂಪಾಜೆ ಅಂಧತ್ವ ನಿವಾರಣಾ ಸಮಿತಿ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಕುಮಾರ್, ಮಡಿಕೇರಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಪಾರ್ವತಿ, ಮಡಿಕೇರಿ ಸ್ಮಿತಾ ಐ ಕೇರ್ ಸೆಂಟರ್‍ನ ನೇತ್ರ ತಜ್ಞ ಡಾ. ಪ್ರಶಾಂತ್, ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞ ಡಾ. ವಿಕ್ರಮ್ ಇತರರು ಪಾಲ್ಗೊಳ್ಳಲಿದ್ದಾರೆ.