ಮಡಿಕೇರಿ, ಅ.19 : ಸವಿತಾ ಸಮಾಜದ ಅಭ್ಯುದಯಕ್ಕಾಗಿ 2018-19 ನೇ ಸಾಲಿನ ಮುಂಗಡ ಪತ್ರದಲ್ಲಿ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸಬೇಕೆಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಪ್ರತಿನಿಧಿ ವೈ. ಪÀÅಟ್ಟರಾಜು, ಅಭಿವೃದ್ಧಿ ನಿಗಮಕ್ಕಾಗಿ ಒತ್ತಾಯಿಸಿ ಅ.24 ರಂದು ಬೆಳಿಗ್ಗೆ 9.30 ಕ್ಕೆ ನಗರದ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಗಳ ಕಚೇರಿ ಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಸವಿತಾ ಸಮಾಜದ ಬೇಡಿಕೆಗಳ ಕುರಿತು ಜಿಲ್ಲಾಡಳಿತದ ಗಮನ ಸೆಳೆಯುವದಲ್ಲದೆ, ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಒತ್ತಾಯಿಸುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಲಾಗು ವದೆಂದು ತಿಳಿಸಿದರು.
ಮನವಿ ಮೂಲಕ ಸಮಾಜ ಕಲ್ಯಾಣ ಸಚಿವರಿಗೂ ಸವಿತಾ ಸಮಾಜದ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಾಗುವದು. ಆರ್ಥಿಕವಾಗಿ ಹಿಂದುಳಿದಿರುವ ಸವಿತಾ ಸಮಾಜಕ್ಕೆ ರಾಜ್ಯ ಸರ್ಕಾರ ಘೋಷಿಸುತ್ತಿರುವ ಅನುದಾನ ಅಲ್ಪಮೊತ್ತದ್ದಾಗಿದೆ. ಆದ್ದರಿಂದ ನಮ್ಮ ಸಮಾಜಕ್ಕೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಡುವದಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಅಗತ್ಯವಿದೆಯೆಂದು ಪುಟ್ಟರಾಜು ಅಭಿಪ್ರಾಯಪಟ್ಟರು.
ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಟಿ.ಮಧು ಮಾತನಾಡಿ, ಸವಿತಾ ಸಮಾಜವು 2(ಎ) ಮೀಸಲಾತಿಯಡಿ ಬರುತ್ತಿದ್ದು, ಈ ವಿಭಾಗದಲ್ಲಿ 108 ಉಪ ಜಾತಿಗಳು ಸೇರ್ಪಡೆಗೊಳ್ಳುವ ದರಿಂದ ಸವಿತಾ ಸಮಾಜಕ್ಕೆ ಸಿಗಬೇಕಾದ ನ್ಯಾಯಯುತ ಸೌಲಭ್ಯ ದೊರೆಯುತ್ತಿಲ್ಲವೆಂದರು. ಸರ್ಕಾರದ ಸೌಲಭ್ಯಕ್ಕಾಗಿ ಉಪ ಜಾತಿಗಳೊಂದಿಗೆ ಸ್ಪರ್ಧೆಗಿಳಿಯುವದು ಅಸಾಧ್ಯವಾದು ದರಿಂದ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದರು.
ಜಿಲ್ಲಾಧ್ಯಕ್ಷ ಹೆಚ್.ಎನ್. ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿರುವ 10 ಸಾವಿರಕ್ಕು ಅಧಿಕ ಸವಿತಾ ಸಮಾಜದ ಬಂಧುಗಳು ಸರ್ಕಾರದ ಸೌಲಭ್ಯಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ವೀರಾಜಪೇಟೆ ಅಧ್ಯಕ್ಷ ಬಿ.ಎಸ್. ದಿನೇಶ್, ಮಡಿಕೇರಿ ಕಾರ್ಯದರ್ಶಿ ಅವಿನಾಶ್ ಹಾಗೂ ತಾಲೂಕು ಪ್ರತಿನಿಧಿ ಎಂ.ಜಿ. ಚರಣ್ ಉಪಸ್ಥಿತರಿದ್ದರು.