ಮಡಿಕೇರಿ, ಅ.19 : ಸರ್ಕಾರಿ ಶಾಲೆಗಳ ಅಭ್ಯುದಯದೊಂದಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವುದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರುವಂತೆ ಒತ್ತಾಯಿಸಿ ರಾಜ್ಯ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶವನ್ನು ತಾ. .30 ಮತ್ತು 31 ರಂದು ಬೆಂಗಳೂರಿನಲ್ಲಿ ನಡೆಸಲಾಗುವದೆಂದು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಜಿಲ್ಲಾ ಅಧ್ಯಕ್ಷ ಕೆ.ಎ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆಯು ಶಿಕ್ಷಣ ವ್ಯವಸ್ಥೆಯ 21 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಮಾವೇಶ ನಡೆಸುತ್ತಿರುವುದಾಗಿ ತಿಳಿಸಿದರು. ಎರಡು ದಿನಗಳ ಕಾಲ ಸಮಾವೇಶವು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 30 ಮಂದಿ ತೆರಳಲಿದ್ದಾರೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು, ಹಿರಿಯ-ಕಿರಿಯ ಪÀÇರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಬೇಕು, ಶಿಕ್ಷಕರಿಗೆ ಕಾಲ ಕಾಲಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡುವ ಮೂಲಕ ಶೈಕ್ಷಣಿಕ ಉನ್ನತೀಕರಣ ಮಾಡಬೇಕು, ನೂತನ ತಂತ್ರಜ್ಞಾನಗಳನ್ನು ಅಳವಡಿಸಿ ತಾಂತ್ರಿಕ ವ್ಯವಸ್ಥೆಗಳನ್ನು ಮಾಡಬೇಕು, ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಇಂಗ್ಲೀಷ್ನ್ನು ಒಂದು ಭಾಷೆಯಾಗಿ ಪರಿಣಾಮಕಾರಿಯಾಗಿ ಕಲಿಸಬೇಕು. ಅಂಗನವಾಡಿ ಕೇಂದ್ರಗಳನ್ನು ಮಕ್ಕಳ ಪಾಲನಾ ಕೇಂದ್ರವಾಗಿಸಲು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಪ್ರತಿ ಗ್ರಾಮಗಳಲ್ಲು ಶಿಶುಪಾಲನಾ ಕೇಂದ್ರಗಳನ್ನು ರಚಿಸಬೇಕೆಂದು ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಕೆ.ಎ.ನಾಗೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಾನು ರಿಜ್ವಾನ್, ಮಡಿಕೆÉೀರಿ ತಾಲ್ಲೂಕು ಅಧ್ಯಕ್ಷ ದೇವಂಗೋಡಿ ಸಿ. ರಾಮಚಂದ್ರ ಹಾಗೂ ವೀರಾಜಪೇಟೆ ತಾಲ್ಲೂಕು ಅಧ್ಯಕ್ಷೆ ನ್ಯಾನ್ಸಿ ಅಂತೋಣಿ ಉಪಸ್ಥಿತರಿದ್ದರು.