ಮಡಿಕೇರಿ, ಅ. 20: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ತಾ. 21 ರಂದು (ಇಂದು) ಬೆಳಿಗ್ಗೆ 8.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ಪ್ರದಾನ ಜಿಲ್ಲಾ ಮತ್ತು ಸೆಷನ್ ನ್ಯಾಯಧೀಶ ಮಾಸ್ಟರ್ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ, ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.