ಸೋಮವಾರಪೇಟೆ, ಅ. 19: ಮಹಿಳೆಯರ ಆರೋಗ್ಯ ದೃಷ್ಟಿಯಿಂದ ಪ್ರಧಾನಿ ಮೋದಿಯವರು ಚಾಲನೆ ನೀಡಿದ ಉಜ್ವಲ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದಾಗಿ ದೇಶಾದ್ಯಂತ ಕ್ರಾಂತಿಯಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಗರ್ವಾಲೆ ಗ್ರಾಮ ಪಂಚಾಯಿತಿ ಯಲ್ಲಿ ಆಯೋಜಿಸಿದ್ದ ಉಜ್ವಲ ಯೋಜನೆ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ 19 ಸಾವಿರ ಬಡ ಕುಟುಂಬಗಳು ಆಯ್ಕೆಯಾಗಿದ್ದು, ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದು ಸಂಸದರು ಮನವಿ ಮಾಡಿದರು.

ಇದೇ ವೇಳೆ ಗರ್ವಾಲೆ ಗ್ರಾಮ ಪಂಚಾಯಿತಿ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಆಯ್ದ ಫಲಾನುಭವಿಗಳಿಗೆ ಮಿಕ್ಸಿ ಮತ್ತು ಕುಕ್ಕರ್‍ಗಳನ್ನು ಸಂಸದರು ಹಾಗೂ ಶಾಸಕರು ವಿತರಿಸಿದರು.

ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ. ಬಿ. ಅಭಿಮನ್ಯುಕುಮಾರ್, ಗರ್ವಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಷ್, ಉಪಾಧ್ಯಕ್ಷ ಚಾಮೇರ ಪಳಂಗಪ್ಪ, ಪಾರ್ವತಿ ಹೆಚ್‍ಪಿ ಗ್ಯಾಸ್ ಏಜೆನ್ಸಿ ಮಾಲೀಕ ಎಸ್. ಎ. ಮುರಳೀಧರ್ ಮತ್ತಿತರರು ಉಪಸ್ಥಿತರಿದ್ದರು.