ಕೂಡಿಗೆ, ಅ. 19: ಶ್ರೀ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂಕ್ರಮಣ ಗೀತ ಗಾಯನ ಹಾಗೂ ಸಂಕ್ರಮಣ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ವಹಿಸಿದ್ದರು.

ಕಾರ್ಯಕ್ರಮವನ್ನು ಆಕಾಶವಾಣಿ ಕಲಾವಿದ ಬಿ.ಎ. ಗಣೇಶ್ ಉದ್ಘಾಟಿಸಿ, ಜಿಲ್ಲಾ ಕಸಾಪದ ಎಲ್ಲಾ ಸದಸ್ಯರುಗಳಿಗೆ ಇಂತಹ ಪುಣ್ಯ ಸ್ಥಳದಲ್ಲಿ ಗಾಯನಕ್ಕೆ ಅವಕಾಶ ಮಾಡಿಕೊಟ್ಟಿರುವದು ಉತ್ತಮ ಬೆಳವಣಿಗೆ. ಇದರ ಮುಖೇನ ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ಕಸಾಪದ ಸದಸ್ಯರುಗಳಿಗೆ ಅನುಕೂಲವಾಗಿದೆ ಎಂದರು.

ಮುಖ್ಯ ಅತಿಥಿ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ ಮಾತನಾಡಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲರನ್ನು ಒಗ್ಗೂಡಿಸಿಕೊಂಡು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತನ್ನ ಚಟುವಟಿಗಳನ್ನು ಚುರುಕುಗೊಳಿಸುತ್ತಿದೆ ಎಂದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕÀ ಚಿನ್ನಸ್ವಾಮಿ, ಕಲಾವಿದÀ ವಿ.ಟಿ. ಶ್ರೀನಿವಾಸ್, ವೀರಾಜಪೇಟೆ ಕಸಾಪ ತಾಲೂಕು ಅಧ್ಯಕ್ಷ ಮಲ್ಲೇಂಗಡ ಮಧೋಶ್ ಪೂವಯ್ಯ, ಕಸಾಪ ಭಾಗಮಂಡಲ ಹೋಬಳಿ ಘಟಕದ ಅಧ್ಯಕ್ಷ ಶ್ರೀಧರ್, ವೀರಾಜಪೇಟೆ ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಚಮ್ಮಟ್ಟೀರ ಪ್ರವೀಣ್, ಕಸಾಪ ನಿರ್ದೇಶಕರುಗಳಾದ ಕೆ.ಕೆ.ನಾಗರಾಜಶೆಟ್ಟಿ, ಅಶ್ವಥ್‍ಕುಮಾರ್, ಶಾಲಿನಿ ಇದ್ದರು.

ಗೀತ ಗಾಯನದಲ್ಲಿ ಜಿಲ್ಲೆಯ ಕಸಾಪದ 22 ಸದಸ್ಯರುಗಳು ಹಾಡಿದರು. ಭಾಗವಹಿಸಿದ ಎಲ್ಲಾ ಗಾಯಕರಿಗೂ ಪ್ರಶಂಸನಾ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.

ಕವಿಗೋಷ್ಠಿ

ಕವಿಗೋಷ್ಠಿಯನ್ನು ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಸುಭಾಶ್‍ನಾಣಯ್ಯ ಕವನ ವಾಚಿಸುವದರ ಮೂಲಕ ಉದ್ಘಾಟಿಸಿ ದರು. ನಂತರ ಮಾತನಾಡಿದ ಅವರು, ಕವಿಗಳು ತಾವು ರಚಿಸಿದ ಕವಿತೆಗಳನ್ನು ವಾಚಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಇದರ ಮೂಲಕ ಕವಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು, ಕನ್ನಡ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಮಣಜೂರು ಮಂಜುನಾಥ್, ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್, ಸಾಹಿತಿಗಳಾದ ಸತೀಶ್ ಕಾಜೂರ್, ಬೈತಡ್ಕ ಜಾನಕಿ, ಕವಿಗೋಷ್ಠಿಯಲ್ಲಿ ಜಿಲ್ಲೆಯ 28 ಕವಿಗಳು ತಮ್ಮ ಕವನಗಳನ್ನು ವಾಚಿಸಿದರು. ಕವಿಗೋಷ್ಠಿಯಲ್ಲಿ ಕವನ ವಾಚಿಸಿದ ಎಲ್ಲಾ ಕವಿಗಳಿಗೂ ಪ್ರಶಂಸನಾ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.

ಶಿಕ್ಷಕಿ ಸುನಿತ ಕಾರ್ಯಕ್ರಮ ನಿರೂಪಿಸಿ, ನಾಗರಾಜಶೆಟ್ಟಿ ಸ್ವಾಗತಿಸಿ, ಹರೀಶ್ ಕಿಗ್ಗಾಲು ವಂದಿಸಿದರು.