ಮಡಿಕೇರಿ, ಅ. 20: ವಿಷನ್ 2025 ಡಾಕ್ಯುಮೆಂಟ್ (ನವ ಕರ್ನಾಟಕ-2025) ಯೋಜನೆಯಡಿ ಮುಂದಿನ 7 ವರ್ಷಗಳ ಅವಧಿಯಲ್ಲಿ ಕರ್ನಾಟಕ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೊಡಗು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಸಾರ್ವಜನಿಕರಿಂದ ಪ್ರತಿಕ್ರಿಯೆ-ಅಭಿಪ್ರಾಯ ಪಡೆಯಲಾಗುತ್ತಿದೆ.

ಆ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳು ಮತ್ತು ವೈವಿಧ್ಯಮಯ ಆಸಕ್ತಿಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿರುವ ವಿಷನ್ 2025 ಯೋಜನೆಯ ನೀಲನಕ್ಷೆ ತಯಾರಿಸಲು, ಜಿಲ್ಲಾ ಮಟ್ಟದ ಸಭೆಯಲ್ಲಿ ಸ್ಥಳೀಯ ಸಂಸದರು, ಶಾಸಕರು, ಜಿ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಸೈನಿಕರುಗಳು, ಖ್ಯಾತ ಶಿಕ್ಷಣ ತಜ್ಞರು, ಧಾರ್ಮಿಕ ನಾಯಕರು, ಸಹಕಾರ ಕ್ಷೇತ್ರ, ಅರೆ ಸರ್ಕಾರಿ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳ ನಾಗರಿಕ ಸೊಸೈಟಿ ಸಂಸ್ಥೆಗಳು, ವಿವಿಧ ಇಲಾಖೆಗಳ ನಿವೃತ್ತ ಅಧಿಕಾರಿ/ ಸಿಬ್ಬಂದಿಗಳು, ಬುದ್ದಿಜೀವಿಗಳು, ಹಿರಿಯ ನಾಗರಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಆಸಕ್ತರು ಭಾಗವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ/ಅಭಿಪ್ರಾಯ ಮತ್ತು ಹೊಸ ಕಲ್ಪನೆಗಳ ಸಲಹೆಗಳನ್ನು ಲಿಖಿತವಾಗಿ ಜಿಲ್ಲಾಧಿಕಾರಿಯವರ ಕಚೇರಿ, ವಿಷನ್-2025 ವಿಭಾಗ, ಜಿಲ್ಲಾಡಳಿತ ಭವನ ಅಥವಾ hಣಣಠಿ://ತಿತಿತಿ.ಞoಜಚಿgu.ಟಿiಛಿ.iಟಿ/ ನಲ್ಲಿ ಸಲಹೆ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ನೋಡಲ್ ಅಧಿಕಾರಿಗಳಾದ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ ಹಾಗೂ ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.