ಮಡಿಕೇರಿ, ಅ. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು. ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಸರ್ಕಾರ ಮಹಿಳೆಯರಿಗೆ ಶೌರ್ಯ ಪ್ರಶಸ್ತಿಯನ್ನು ನೀಡುತ್ತಿದ್ದು, ಶೌರ್ಯ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಮಹಿಳೆಯರು ಮಹತ್ತರ ಸಾಧನೆ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದು ಕರೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶ ಪ್ರೇಮ ಸ್ಮರಿಸುವಂತಾಗಬೇಕು ಎಂದರು.

ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸಿದ್ದರಾಜು ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ

(ಮೊದಲ ಪುಟದಿಂದ) ಅವರು ತಮ್ಮ ಪ್ರಾಂತ್ಯದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವದರ ಜೊತೆಗೆ ನಾಡಿನ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದರು ಎಂದು ಅವರು ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಿ.ಎಂ. ದಾನೋಜಿ ಮಾತನಾಡಿದರು.

ತಹಶೀಲ್ದಾರ್ ಕುಸುಮ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ಜಿಲ್ಲಾ ಉದ್ಯೋಗ ವಿನಿಮಾಯಾದಿಕಾರಿ ಸಿ.ಜಗನ್ನಾಥ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಸಾವಿತ್ರಿ ನಿರೂಪಿಸಿದರು. ಪತ್ತಾರ್ ಮತ್ತು ಷಡಕ್ಷರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.