ಮಡಿಕೇರಿ, ಅ. 23 : ಸ್ವಾಯತ್ತ ಕೊಡವ ಲ್ಯಾಂಡ್ ಒಳಗೊಂಡಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿರಿಸಿಕೊಂಡು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನವೆಂಬರ್ 26 ರಂದು ಮಡಿಕೇರಿಯಲ್ಲಿ 27ನೇ ವರ್ಷದ ‘ಕೊಡವ ನ್ಯಾಷನಲ್ ಡೇ’ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಅರ್ಥ ಶಾಸ್ತ್ರಜ್ಞ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಗಾಂಧಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ರಾಜಕೀಯ ಮುತ್ಸದ್ಧಿ ಡಾ| ಸುಬ್ರಮಣಿಯನ್ ಸ್ವಾಮಿ ಅವರು ಕೊಡವರ ಹಕ್ಕುಗಳ ಕುರಿತು ಪ್ರಸ್ತಾಪಿಸಲಿದ್ದಾರೆ ಎಂದರು.ಡಾ. ಸುಬ್ರಮಣಿಯನ್ ಸ್ವಾಮಿ ಅವರನ್ನು ಬೆಂಗಳೂರಿನ ಕನಕಪÀÅರ ರಸ್ತೆಯಲ್ಲಿರುವ ಆರ್ಟ್ ಆಫ್ ಲೀವಿಂಗ್‍ನ ಪಂಡಿತ್ ಶ್ರೀ ರವಿಶಂಕರ್ ಗುರೂಜಿಯವರ ಆಶ್ರಮದಲ್ಲಿ ಸಿಎನ್‍ಸಿ ನಿಯೋಗ ಭೇಟಿಯಾಗಿ ಅಧಿಕೃತ ಆಹ್ವಾನ ನೀಡಿದೆ. ಭೇಟಿಯ ಸಂದರ್ಭ ಸುಬ್ರಮಣಿಯನ್ ಸ್ವಾಮಿ ಅವರು, ತಾನು ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್‍ರವರಿಗೆ ಕೊಡವ ಸ್ವಾಯತ್ತತೆ, ಕೊಡವ ಬುಡಕಟ್ಟಿಗೆ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನ ಮತ್ತು ಕೊಡವತಕ್ಕ್ ಅನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆಗೊಳಿಸುವ ಕುರಿತು ಮನವರಿಕೆ

(ಮೊದಲ ಪುಟದಿಂದ) ಮಾಡಿದ್ದೇನೆಂದು ಮತ್ತು ಈ ಸಂಬಂಧ ಸಿಎನ್‍ಸಿಯ ಕೊಡವ ನ್ಯಾಷನಲ್ ಡೇಯಲ್ಲಿ ಭಾಗವಹಿಸುವದನ್ನು ಅವರ ಗಮನಕ್ಕೆ ತಂದಿರುವದಾಗಿ ತಿಳಿಸಿದ್ದಾಗಿ ನಾಚಪ್ಪ ಹೇಳಿದರು.

ಸಿಎನ್‍ಸಿ ನಿಯೋಗದಲ್ಲಿ ಸಂಘಟನೆಯ ಪ್ರಮುಖರಾದ ಕಲಿಯಂಡ ಪ್ರಕಾಶ್, ಪÀÅಲ್ಲೇರ ಕಾಳಪ್ಪ, ಅಪ್ಪಚ್ಚಿರ ರಮ್ಮಿ ನಾಣಯ್ಯ, ಕಾಟುಮಣಿಯಂಡ ಉಮೇಶ್ ಮತ್ತು ಚಂಬಂಡ ಜನತ್‍ಕುಮಾರ್ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಡಾ| ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಸ್ವಾತಂತ್ರ್ಯಾನ್ವೇಷಣೆ (ಕೊಡವ ಕ್ವೆಸ್ಟ್ ಫಾರ್ ಅಟೋನಮಿ ಅಂಡ್ ಗ್ಲೋಬಲ್ ಪಾಲಿಟಿಕ್ಸ್) ಮತ್ತು ಜಾಗತಿಕ ರಾಜಕೀಯ ವಿದ್ಯಮಾನದ ಕುರಿತು ಮಾತನಾಡಲಿದ್ದಾರೆ. ಗೌರವ ಅತಿಥಿಯಾಗಿ ಅಖಿಲ ಭಾರತ ವಿರಾಟ್ ಹಿಂದು ಸಂಗಮ್‍ನ ಮುಂಬೈನ ಜಗದೀಶ್ ಶೆಟ್ಟಿಯವರು ಭಾಗವಹಿಸಲಿದ್ದಾರೆಂದು ಎನ್.ಯು.ನಾಚಪ್ಪ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಲಿಯಂಡ ಪ್ರಕಾಶ್, ಪುಲ್ಲೇರ ಕಾಳಪ್ಪ ಹಾಗೂ ಚಂಬಂಡ ಜನತ್ ಉಪಸ್ಥಿತರಿದ್ದರು.