ಮಡಿಕೇರಿ, ಅ. 24: ರಾಜ್ಯ ಸರ್ಕಾರ ಘೋಷಿಸಿರುವ ಟಿಪ್ಪು ಜಯಂತಿ ಆಚರಣೆಯ ನೇತೃತ್ವವನ್ನು ವಹಿಸಿರುವ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಟಿಪ್ಪು ಜಯಂತಿ ವಿರುದ್ಧ ತೆಗೆದುಕೊಂಡಿರುವ ನಿರ್ಣಯವನ್ನು ನಗರ ಬಿ.ಜೆ.ಪಿ. ಸ್ವಾಗತಿಸುತ್ತದೆ ಎಂದು ಬಿಜೆಪಿ ನಗರಾಧ್ಯಕ್ಷರಾದ ಮಹೇಶ್ ಜೈನಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗಿನ ಜನತೆಗೆ ಬೇಡವಾಗಿರುವ ಈ ಜಯಂತಿಯನ್ನು ಸರ್ಕಾರ ಕಳೆದೆರಡು ವರ್ಷಗಳಿಂದ ಆಚರಿಸುತ್ತಾ ಬರುತ್ತಿದ್ದು, ಈ ಆಚರಣೆಯಿಂದ ಕೊಡಗಿನ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ದಕ್ಕೆ ಉಂಟಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಟಿಪ್ಪು ಜಯಂತಿಯ ಪರ ಹೇಳಿಕೆ ನೀಡಿರುವ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ಅವರು ಕೊಡಗಿನ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿರುವದಲ್ಲದೆ ಕೋಮು ಗಲಭೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಹೇಶ್ ಜೈನಿ ಆರೋಪಿಸಿದ್ದಾರೆ.