ಮಡಿಕೇರಿ, ಅ. 24: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯ ನಿವಾರಣೆಯ ನಿಟ್ಟಿನಲ್ಲಿ 6ನೇ ವೇತನ ಆಯೋಗದ ಅಂತಿಮ ವರದಿ ಸಲ್ಲಿಸುವದಕ್ಕೆ ಪÀÇರ್ವಭಾವಿಯಾಗಿ ಪ್ರಸಕ್ತ ಸಾಲಿನ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಮೂಲ ವೇತನದ ಶೇ. 30 ರಷ್ಟು ಮಧ್ಯಂತರ ಪರಿಹಾರವನ್ನು ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆ ಸರ್ಕಾರವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಬಿ.ರವಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾ. 25 ರಂದು (ಇಂದು) ಜಿಲ್ಲಾಧಿಕಾರಿಗಳ ಕಛೇರಿ ಎದುರು ಮತ್ತು ತಾಲೂಕು ಕೇಂದ್ರಗಳ ತಹಶೀಲ್ದಾರ್ ಕಛೇರಿ ಮುಂಭಾಗ ಆ ವ್ಯಾಪ್ತಿಯ ಸರ್ಕಾರಿ ನೌಕರರು ಮಧ್ಯಾಹ್ನ 1 ರಿಂದ 1.30 ಗಂಟೆಯವರೆಗೆ ಸಾಂಕೇತಿಕ ಧರಣಿ ನಡೆಸಲಿದ್ದಾರೆ. ರಾಜ್ಯವ್ಯಾಪಿ ಏಕಕಾಲದಲ್ಲಿ ಧರಣಿ ನಡೆಯಲಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ವೇತನ, ಭತ್ಯೆಗಳು ಮತ್ತು ತುಟ್ಟಿ ಭತ್ಯೆ ಶಿಫಾರಸುಗಳು ರಾಜ್ಯ ಸರ್ಕಾರಿ ನೌಕರರಿಗೂ ಯಥಾವತ್ತಾಗಿ ಅನುಷ್ಠಾನಗೊಳಿಸಿ ಇದೇ ಸಾಲಿನ ಏಪ್ರಿಲ್ 1 ರಿಂದ ಪÀÇರ್ವಾನ್ವಯವಾಗಿ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘ ಈ ಸಂಬಂಧ ಹಿಂದೆಯೇ ರಾಜ್ಯದ ಮುಖ್ಯ ಮಂತ್ರಿಗಳು ಮತ್ತು ವೇತನ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಬೇಡಿಕೆಯನ್ನು ಸಲ್ಲಿಸಿದೆ. ಆ ಸಂದರ್ಭ 6ನೇ ವೇತನ ಆಯೋಗದ ವರದಿಯನ್ನು ಪ್ರಸಕ್ತ ಸಾಲಿನ ಸೆಪ್ಟೆÉಂಬರ್ ಒಳಗೆ ನೀಡುವಂತೆ ಸೂಚಿಸಲಾಗಿತ್ತಾದರು, ಇದೀಗ ಅವಧಿಯನ್ನು ಜನವರಿ 18ರವರೆಗೆ ವಿಸ್ತರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಆಯೋಗದ ವರದಿಯನ್ನು ನವೆಂಬರ್ ಒಳಗೆ ನೀಡುವ ಮೂಲಕ ಅದನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಇದೇ ಸಂದರ್ಭ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಹಾಲಿ ಪಡೆಯುತ್ತಿರುವ ಪಿಂಚಣಿ ಶೇ.30 ರಷ್ಟು ಮಂಜೂರು ಮಾಡುವದರ ಜೊತೆಗೆ, ನವೆಂಬರ್ ಅಂತ್ಯದ ಒಳಗೆ ಆಯೋಗದ ವರದಿ ಪಡೆದು ಶಿಫಾರಸುಗಳನ್ನು ಅನುಷ್ಠಾನಗೊಳಿಸ ಬೇಕೆಂದು ಕೆ.ಬಿ.ರವಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆÉಯ ಗೌರವಾಧ್ಯಕ್ಷರಾದ ಎ.ಜೆ.ಮಹೇಶ್, ಪ್ರಧಾನ ಕಾರ್ಯದರ್ಶಿ ಎನ್.ಟಿ. ಮುತ್ತಣ್ಣ, ಉಪಾಧ್ಯಕ್ಷ ಸಿ.ಎ.ಅಯ್ಯಣ್ಣ ಹಾಗೂ ಖಜಾಂಚಿ ಎನ್.ಯು. ಯೋಗೇಶ್ ಉಪಸ್ಥಿತರಿದ್ದರು.