ಆಲೂರುಸಿದ್ದಾಪುರ, ಅ. 25: ಮಡಿಕೇರಿಯ ಸಂತ ಮೈಕಲ್ಲರ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ತಸ್ಲೀಂ ಕಾಸರ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾಳೆ ಎಂದು ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಶನಿವಾರಸಂತೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಡಿಕೇರಿಯ ಸಂತ ಮೈಕಲ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲಿಕೋತ್ಸವ ಸ್ಪರ್ಧೆ ಕಾರ್ಯಕ್ರಮದಲ್ಲಿ ಶನಿವಾರಸಂತೆಯ ಸೆಕ್ರೇಡ್ ಹಾರ್ಟ್ ಅಂಗ್ಲಮಾಧ್ಯಮ ಶಾಲೆಯ ಪ್ರೌಢÀಶಾಲಾ ವಿಭಾಗದ ವಿದ್ಯಾರ್ಥಿನಿ ಕವನ ಇಂಗ್ಲಿಷ್ ಬಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ, ಇದೇ ಶಾಲೆಯ ಅಭಯ್ ಫ್ಯಾನ್ಸಿ ಡ್ರೆಸ್ ಸ್ಪಧೆರ್Éಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.

ಸೋಮವಾರಪೇಟೆ