ಮಡಿಕೇರಿ, ಆ. 26: ಮಡಿಕೇರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸುವ ಸಭೆ ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್‍ನ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.