ವೀರಾಜಪೇಟೆ, ಅ. 27: ವಾಹನ ಚಾಲನೆಯ ಮೊದಲು ಪ್ರತಿಯೊಬ್ಬ ರಿಗೂ ವಾಹನ ನಿಂiÀiಮಾವಳಿಗಳ ಅರಿವಿದ್ದರೆ ವಾಹನ ಅಪರಾಧಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯವಾಗಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಹೇಳಿದರು. ಇಲ್ಲಿನ ಮಗ್ಗುಲದ ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ 2017-18ಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿದ್ಯಾರ್ಥಿ ಒಕ್ಕೂಟಕ್ಕೆ ಚಾಲನೆ ನೀಡುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜೇಂದ್ರ ಪ್ರಸಾದ್ ಅವರು ವಿದ್ಯಾರ್ಥಿಗಳು ಮಾದಕ ದ್ರವ್ಯ ದುಶ್ಚಟಗಳಿಂದ ದೂರವಿದ್ದು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದರು.
ವಿದ್ಯಾರ್ಥಿ ಒಕ್ಕೂಟದ ನೂತನ ಆಡಳಿತ ಮಂಡಳಿಯ ಪದಾಧಿಕಾರಿ ಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ಪೊನ್ನಪ್ಪ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜೇಂದ್ರ ಪ್ರಸಾದ್ ಅವರು ವಿದ್ಯಾರ್ಥಿ ಒಕ್ಕೂಟದ ಪ್ರತಿನಿಧಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ. ಸುನಿಲ್ ಮುದ್ದಯ್ಯ, ಉಪ ಪ್ರಾಂಶುಪಾಲ ಡಾ. ಜಿತೇಶ್ ಜೈನ್, ಟೋನಿ ಜೋಸೆಫ್ ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.