ಒಡೆಯನಪುರ, ಅ. 27 :ಕೊಡ್ಲಿಪೇಟೆ ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಘಟಕದ ವತಿಯಿಂದ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವದು. ಈ ಕುರಿತು ಪ್ರತಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರವೇ ಅಧ್ಯಕ್ಷ ಡಿ.ಪಿ. ಭೂಪಾಲ್ ಅವರು ಕರವೇ ಘಟಕದ 10ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವದು. ಅಂದು ಬೆಳಿಗ್ಗೆ 10 ಗಂಟೆಗೆ ಕೊಡ್ಲಿಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಕನ್ನಡಾಂಬೆ ಭುವನೇಶ್ವರಿಯ ಧ್ಜಜಾರೋಹಣವನ್ನು ಕೊಡ್ಲಿಪೇಟೆ ಕ್ಷೇತ್ರದ ಜಿ.ಪಂ. ಸದಸ್ಯ ಸಿ.ಪಿ. ಪುಟ್ಟಸ್ವಾಮಿ ನೆರವೇರಿಸಲಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಕನ್ನಡಾಂಬೆಯ ಭಾವಚಿತ್ರದೊಂದಿಗೆ ಕೊಡ್ಲಿಪೇಟೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಸಮೂಹ, ನಾನಾ ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಹಾಗೂ ಸಾರ್ವಜನಿಕರು ಪಟ್ಟಣದ ಹೊಸ ಮುನ್ಸಿಪಾಲಿಟಿ ಯಿಂದ ಪ್ರಮುಖ ಬೀದಿಗಳಲ್ಲಿ ಕನ್ನಡಾಂಬೆಯ ಮೆರವಣಿಗೆ ನಡೆಸಲಾಗುವದು, ಸಾಂಸ್ಕøತಿಕ ಮೆರವಣಿಗೆಯನ್ನು ಕೊಡ್ಲಿಪೇಟೆ ಕೆನರಾ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಕೆ. ಅಶೋಕ್ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಕೊಡ್ಲಿಪೇಟೆಯ ನಿವೃತ್ತ ಪ್ರಾಂಶುಪಾಲ ಕೆ.ಎನ್. ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ಪೂಜಾರಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ದೀಪಕ್, ತಾ.ಪಂ. ಅಧ್ಯಕ್ಷೆ ಪುಷ್ಪಾರಾಜೇಶ್, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಅನುಸೂಯ ಹೇಮರಾಜ್ ಮುಂತಾದವರು ಭಾಗವಹಿಸಲಿದ್ದಾರೆ. ಗೋಷ್ಠಿಯಲ್ಲಿ ಘಟಕದ ಕಾರ್ಯದರ್ಶಿ ಡಿ.ಆರ್.ವೇಧಕುಮಾರ್, ಸಹ ಕಾರ್ಯದರ್ಶಿ ಜಿ.ಆರ್. ಯೋಗಾನಂದ್, ಸದಸ್ಯ ರಾಮಕೃಷ್ಣ ಆಚಾರ್ ಹಾಜರಿದ್ದರು.