ಸಿದ್ದಾಪುರ, ಅ. 27: ಡೆಂಗ್ಯೂ ಜ್ವರಕ್ಕೆ ಮಹಿಳೆ ಯೋರ್ವಳು ಮೃತಪಟ್ಟ ಘಟನೆ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ನಲ್ವತ್ತೇಕರೆಯ ನಿವಾಸಿ ಹಸನ್ ಎಂಬವರ ಪತ್ನಿ ಹಾಜಿರ (36) ಎಂಬವರು ಕೆಲವು ದಿನಗಳಿಂದ ಡೆಂಗ್ಯೂ ಜ್ವರಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇವರನ್ನು ಮಂಗಳೂರಿಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ. ಮೃತರು ಪತಿ ಹಾಗೂ ಈರ್ವರು ಮಕ್ಕಳನ್ನು ಅಗಲಿದ್ದಾರೆ.