ಗೋಣಿಕೊಪ್ಪಲು, ಅ. 29: ಗೋಣಿಕೊಪ್ಪಲು ಆಟೋ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ 8ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಹಾಗೂ ವೈವಿಧ್ಯಮಯವಾಗಿ ಆಚರಿಸಲಾಗುವದು ಎಂದು ಸಂಘದ ಅಧ್ಯಕ್ಷ ಸಿ.ಕೆ. ಬೋಪಣ್ಣ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನ.1 ರಂದು ಬೆಳಿಗ್ಗೆ 9.30 ಗಂಟೆಗೆ ಇಲ್ಲಿನ ಆಟೋ ರಿಕ್ಷಾ ನಿಲ್ದಾಣದಲ್ಲಿ ಕನ್ನಡಮ್ಮನ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದು.

ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿ ಅಲಂಕೃತ ಆಟೋಗಳ ಮೆರವಣಿಗೆಯನ್ನು ಎಪಿಎಂಸಿ ಮುಂಭಾಗದಿಂದ ಬಸ್ ನಿಲ್ದಾಣ ಸಮೀಪದ ಆಟೋ ನಿಲ್ದಾಣದವರೆಗೂ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 12.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ರಾತ್ರಿ 8 ಗಂಟೆಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ ಎಂದು ಬೊಪಣ್ಣ ತಿಳಿಸಿದ್ದಾರೆ. ಸಂಜೆ 7 ಗಂಟೆಗೆ ಸಮಾರೋಪ ಕಾರ್ಯಕ್ರಮ. ರಾತ್ರಿ 8.30 ಗಂಟೆಗೆ ಇಲ್ಲಿನ ಬಸ್ ನಿಲ್ದಾಣದಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೈಸೂರುವಿನ ಸೋನು ಮೆಲೋಡೀಸ್ ತಂಡದಿಂದ ಸಂಗೀತ ಕಾರ್ಯಕ್ರಮ. ಖ್ಯಾತ ಮಿಮಿಕ್ರಿ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಜಪ್ಪು ಸುಬ್ಬಯ್ಯ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.