ಸಿದ್ದಾಪುರ, ಅ. 29: ಮಹಿಳೆಯರು ಸ್ವಯಂ ಉದ್ಯೋಗದ ಮುಖಾಂತರ ಸ್ವಾವಲಂಬಿ ಬದುಕು ಕಟ್ಟಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಕರೆ ನೀಡಿದರು. ಅನುದಾನದಲ್ಲಿ ಅಂಗವಿಕಲರಿಗೆ, ಮಹಿಳೆಯರಿಗೆ, ಹಾಗೂ ವಿವಿಧ ದೇವಾಲಯಗಳಿಗೆ, ಮಸೀದಿಗಳಿಗೆ, ಹೊಲಿಗೆ ಯಂತ್ರ ಸೋಲರ್ ವಿವಿಧ ಉಪಕರಣಗಳನ್ನು ಸಿದ್ದಾಪುರ ಪಂಚಾಯಿತಿಯ ಸಭಾಂಗಣದಲ್ಲಿ ವಿತರಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಸಿ. ಹಸೈನಾರ್ ಮಾತನಾಡಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಅಧಿಕಾರ ಬಂದ ನಂತರ ಬಡವರ್ಗದ ಮಂದಿಗೆ ಹಲವಾರು ಜನಪರ ಯೋಜನೆಯನ್ನು ಜಾರಿಗೆ ತರುವ ಮೂಲಕ ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದರು.
ಇದೇ ಸಂದರ್ಭದಲ್ಲಿ ಉಸ್ತುವರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿರವರ ಅನುದಾನದಲ್ಲಿ ಚೆನ್ನಯ್ಯನಕೋಟೆ ವ್ಯಾಪ್ತಿಯ 30ಕ್ಕೂ ಅಧಿಕ ಹೆಣ್ಣು ಮಕ್ಕಳಿಗೆ ಹೊಲಿಗೆ ಯಂತ್ರ ಹಾಗೂ ವಿವಿಧ ಮಸೀದಿ, ದೇವಾಲಯಗಳಿಗೆ, ಸೋಲರ್ ಬೀದಿ ದೀಪಗಳನ್ನು ಗಣ್ಯರು ವಿತರಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯೆ ಚಿನ್ನಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಸಲಾಂ, ಉಪಾಧ್ಯಕ್ಷ ಹನೀಫ್, ವಲಯ ಅಧ್ಯಕ್ಷ ವಾಟೇರಿರ ಸುರೇಶ್, ಗ್ರಾ.ಪಂ ಅಧ್ಯಕ್ಷ ಮಣಿ, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಯೋಗೇಶ್, ಸಣ್ಣಯ್ಯ, ಬಾವ ಮಾಲ್ದಾರೆ ಇತರರು ಹಾಜರಿದ್ದರು.